ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ
ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಸೆ.25 : ಇಲ್ಲಿನ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಟಿ.ಪಾಲಾಕ್ಷ ಭೇಟಿ ನೀಡಿ, ಶೈಕ್ಷಣಿಕ ಪ್ರಗತಿ ವೀಕ್ಷಿಸಿದರು.
ತರಗತಿ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಬಳಿಕ ಉಪನ್ಯಾಸಕರು ಮತು ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ ಮಾರ್ಗದರ್ಶನ ಮಾಡಿದರು.
ಉಪನ್ಯಾಸಕರು ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಬೇಕು. ಪರಿಹಾರ ಬೋಧನೆ ತರಗತಿಗಳನ್ನು ನಡೆಸಿ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವಾಗಬೇಕು. ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ನಿಟ್ಟಿನಲ್ಲಿ ವಿಶೇಷ ಬೋಧನೆ ಮಾಡಬೇಕು ಎಂದು ಉಪ ನಿರ್ದೇಶಕರು ತಿಳಿಸಿದರು.
ಪ್ರಾಚಾರ್ಯರಾದ ಎ.ಕೊಟ್ರಗೌಡ, ಕೋರಿ ಹಾಲೇಶ, ಉಪನ್ಯಾಸಕರಾದ ಬಿ.ಪ್ರಕಾಶ, ಗುರುಬಸವರಾಜ, ಪ್ರಶಾಂತ, ದುಶ್ಯಂತ, ನಟರಾಜ ಪಾಟೀಲ್, ಶಿವಕುಮಾರ್, ಆರತಿ ಇದ್ದರು. ಬಳಿಕ ತಾಲೂಕಿನ ಎಲ್ಲ ಪದವಿಪೂರ್ವ ಕಾಲೇಜುಗಳಿಗೆ ಉಪ ನಿರ್ದೇಶಕರು ಭೇಟಿ ನೀಡಿ ಪರಿಶೀಲಿಸಿದರು.