ಬಿಜೆಪಿ ವಿರುದ್ಧ ಮನೋಹರ್ ವಾಗ್ದಾಳಿ
ಬೆಂಗಳೂರು, ಸೆ. ೨೫- ಮೂಡ ಪ್ರಕರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅರ್ಜಿಯನ್ನ ತಿರಸ್ಕರಿಸಿರುವ ಉಚ್ಚ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹ ಪಡಿಸುತ್ತಿರುವವರೆಲ್ಲರೂ ಅನೇಕ ಹಗರಣಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹ ಪಡಿಸುತ್ತಿರುವುದು ಅಪಹಾಸ್ಯವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ತಿಳಿಸಿದ್ದಾರೆ.
ನಗರದ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ವಿರುದ್ಧ ಬಗರ್ ಹುಕ್ಕುಂ ಭ್ರಷ್ಟಾಚಾರದ ಪ್ರಕರಣ ದಾಖಲಾಗಿದೆ ಲೋಕಾಯುಕ್ತ ತನಿಖಾ ಸಂಸ್ಥೆಯಲ್ಲಿ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಅವರ ವಿರುದ್ಧ ಪ್ರಕರಣ ಇದೆ ಇವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆಯಂತೆ ಬಂದಂತೆ ಆಗಿದೆ ಎಂದು ಹೇಳಿದರು.
ಇನ್ನು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ತುರ್ತಾಗಿ ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಪಡಿಸಿದ್ದಾರೆ,
ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರವರು ಒಂದು ರಾಜಕೀಯ ಪಕ್ಷದ ಅಧ್ಯಕ್ಷರ ರೀತಿ ವರ್ತಿಸಬೇಕು ಕೇವಲ ರಾಜೀನಾಮೆ ಕೇಳುವ ಅಧ್ಯಕ್ಷನಾಗಬಾರದು
ಬಿಜೆಪಿ ಅಧ್ಯಕ್ಷರೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಅವರ ಪಕ್ಷದ ಅನೇಕ ನಾಯಕರು ಅವರ ವಿರುದ್ಧ ಈಗಾಗಲೇ ಪಕ್ಷದ ಹೈಕಮಾಂಡ್ಗೆ ದೂರು ಸಲ್ಲಿಸಿದ್ದಾರೆ. ಯಡಿಯೂರಪ್ಪ ಹಾಗೂ ವಿಜಯೇಂದ್ರ ದೊಡ್ಡ ಭ್ರಷ್ಟರು ಎಂದು ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ನೇರವಾಗಿ ಆರೋಪಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಜಿ.ಪ್ರಕಾಶ್, ವೈ.ಪುಟ್ಟರಾಜು ,ಹೇಮರಾಜು, ಚಿನ್ನಿ ಪ್ರಕಾಶ ,ಉಮೇಶ್,ಚಂದ್ರಶೇಖರ ಓಬಳೇಶ,ಮಧು,ರಂಜಿತ್,ಗಜೇಂದ್ರ ಉಪಸ್ಥಿತರಿದ್ದರು.