ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳ ಜೊತೆಗೆ ಸಾರ್ವಜನಿಕರ ಸಹಕಾರ ಮುಖ್ಯ

ಸಂಜೆವಾಣಿ ವಾರ್ತೆ
ದಾವಣಗೆರೆ ಜೂ.೧೩; ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕೇವಲ ಸರ್ಕಾರ, ಇಲಾಖೆಗಳ ಜೊತೆಗೆ ಸಾರ್ವಜನಿಕರು ಮತ್ತು ಪೆÇೀಷಕರು ಸಹ ಸ್ವಯಂ ಪ್ರೇರಣೆಯಿಂದ ನರ್ಮೂಲನೆಗೆ ಬದ್ದರಾಗಬೇಕೆಂದು ಜಿಲ್ಲಾಧಿಕಾರಿ ಹಾಗೂ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನಾ ಯೋಜನಾ ಸೊಸೈಟಿ ಅಧ್ಯಕ್ಷರಾದ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು ನಗರದ ಎಸ್.ಪಿ.ಎಸ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ,ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ವಕೀಲರ ಸಂಘ ಹಾಗೂ ಸ್ವಯಂ ಸೇವಾ ಸಂಸ್ಥೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕತೆ ಮಕ್ಕಳ ಬಾಲ್ಯ ಅವರ ಸಾಮಥ್ರ್ಯ, ಘನತೆಯನ್ನು ಕಸಿದುಕೊಳ್ಳುವ ಮತ್ತು ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಮಾಜಿಕವಾಗಿ ಅಥವಾ ನೈತಿಕವಾಗಿ ಹಾನಿಕಾರಕವಾಗಿದೆ. ಆದ್ದರಿಂದ ಮಕ್ಕಳು ಬಾಲ್ಯದಲ್ಲಿಯೇ ಶಾಲೆಗೆ ಬಂದು ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಆದರೆ ವಿವಿಧ ಕಾರಣಗಳಿಗಾಗಿ ಪಾಲಕರು ಅವರನ್ನು ಶಾಲೆ ಬಿಡಿಸಿ ಚಿಕ್ಕ ವಯಸ್ಸಿನಲ್ಲಿ ಯಾವುದಾದರೂ ದುಡಿಮೆಗೆ ಸೇರಿಸುತ್ತಾರೆ, ಇದು ತಪ್ಪಬೇಕಿದೆ.ಸಂವಿಧಾನ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಹಕ್ಕು ನೀಡಿದೆ, ಆದ್ದರಿಂದ ಎಲ್ಲಿಯಾದರೂ ಮಕ್ಕಳು ಕೆಲಸ ಮಾಡುವುದು ಕಂಡು ಬಂದರೆ ಅವರನ್ನು ಕೆಲಸದಿಂದ ಬಿಡಿಸಿ ಶಾಲೆಗೆ ಕಳಿಸಬೇಕು. ಇದನ್ನು ಸರ್ಕಾರಿ ಇಲಾಖೆ ಅಧಿಕಾರಿಗಳು ಮಾತ್ರವೇ ಮಾಡಬೇಕೆಂದು ಜನತೆ ಸುಮ್ಮನಿರಬಾರದು, ಸಾರ್ವಜನಿಕರು ಸಹ ಅಭಿವೃದ್ಧಿಗೆ ಮುಂದಾಗಿ 18 ವರ್ಷದೊಳಗಿನ ಮಕ್ಕಳ ಶೋಷಣೆ ದೌರ್ಜನ್ಯ, ದಬ್ಬಾಳಿಕೆ, ಲೈಂಗಿಕ ಕಿರುಕುಳ ಅವರ ಅಭಿಪ್ರಾಯ ಮತ್ತು ಸ್ವಾತಂತ್ರ್ಯಕ್ಕೆ ಒತ್ತಡ ಇರುವುದು ಬಲತ್ಕಾರ ಮತ್ತು ಇಚ್ಛಾಶಕ್ತಿ ವಿರುದ್ಧ ಒತ್ತಡ ನಿμÉೀಧಿಸಿ 18 ವರ್ಷದ ತನಕ ಮಕ್ಕಳನ್ನು ಮಕ್ಕಳು ಎಂದು ಪರಿಗಣಿಸಿ ಅವÀರಿಗೆ ಪ್ರೀತಿ, ವಾತ್ಸಲ್ಯ, ಬಾಲ್ಯ,ಶಿಕ್ಷಣ ಮತ್ತು ರಕ್ಷಣೆ ನೀಡಿ ಮಕ್ಕಳ ಕಾನೂನುಗಳನ್ನು ಗೌರವಿಸಿ ಅವರ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕಿದೆ ಎಂದು ತಿಳಿಸಿದರು.ಪಾಲಕರು ಮಕ್ಕಳನ್ನು ದುಡಿಮೆಗೆ ಕಳುಹಿಸಿದೆ ಶಿಕ್ಷಣದ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು. ಮತ್ತು ಅವರಿಗೆ ಶಿಕ್ಷಣ ಕೊಡಿಸಿ ಸಮಾಜದಲ್ಲಿ ತಮ್ಮ ಮಕ್ಕಳು ಸಹ ಮುಂದೆ ಬರುವಂತೆ ಮಾಡಬೇಕು ಎಂದು ಹೇಳಿದರು.