ಬೆಳೆಯುವ ಮಕ್ಕಳಲ್ಲಿ ಸಂಸ್ಕøತಿ, ಸಂಸ್ಕಾರ ಬೆಳೆಸಬೇಕು
ಧಾರವಾಡ,ಜೂ13: ಸಣ್ಣ ವಯಸ್ಸಿನ ಮಕ್ಕಳನ್ನು ವಿದ್ಯೆ ಕಲಿಯುವ ಹೊತ್ತಿನಲ್ಲಿ ದುಡಿಮೆಗೆ ಕಳಿಸಬಾರದು. ಇದು ಅಪರಾಧ. ಸರಕಾರ, ಸಂವಿಧಾನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಕಾನೂನು ರಚಿಸಿ, ಜಾರಿಗೊಳಿಸಿವೆ. ಮಕ್ಕಳಲ್ಲಿ ಸಂಸ್ಕøತಿ, ಸಂಸ್ಕಾರ ಬೆಳೆಸಲು ನಾವು ಆಧ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ನಗರದ ಭಾರತ ಪ್ರೌಢಶಾಲೆಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು.
ಬಾಲ ಮತ್ತು ಕಿಶೋರ ಮಕ್ಕಳನ್ನು ದುಡಿಮೆಗೆ ಕಳಿಸಬಾರದು. ಅವರಿಗೆ ಉತ್ತಮ ಸಂಸ್ಕಾರ ನೀಡಿ, ಶಿಕ್ಷಣ ಮತ್ತು ಕೌಶಲ್ಯಭರಿತ ತರಬೇತಿಯನ್ನು ನೀಡಬೇಕು. ಮಕ್ಕಳನ್ನು ಬೆಳೆಸುವಾಗ ಹೆಣ್ಣು ಗಂಡು ಎಂಬ ಭೇದವಿರಬಾರದು. ಇಬ್ಬರನ್ನು ಸಮಾನವಾಗಿ ಕಾಣಬೇಕು. ಸಂವಿಧಾನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವುದನ್ನು ಮೂಲಭೂತ ಹಕ್ಕಾಗಿ ಅವರಿಗೆ ಕಲ್ಪಿಸಿದೆ ಎಂದು ಅವರು ತಿಳಿಸಿದರು.
ಪ್ರತಿಯೊಬ್ಬರು ಮಕ್ಕಳ ಉತ್ತಮ ಭವಿಷ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ದೇಶದ ಭವಿಷ್ಯ ಭಾವಿ ಪ್ರಜೆಗಳ ಕೈಯಲ್ಲಿದೆ. ಅವರ ಊಟ, ಆಟ, ಪಾಠದ ಜೊತೆಗೆ ಉತ್ತಮ ಸಂಸ್ಕಾರ, ರಾಷ್ಟ್ರ ಪ್ರೇಮ, ದೇಶಾಭಿಮಾನ ಬೆಳೆಸಲು ಪ್ರಾಮುಖ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಕ್ಕಳು ಟಿ.ವಿ, ಮೊಬೈಲ್ ಎಂದು ಸಮಯ ಹಾಳು ಮಾಡದೇ, ಓದು, ಆಟ, ಪಾಠದ ಬಗ್ಗೆ ಗಮನ ಹರಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಯಾವುದೇ ರೀತಿಯ ದೈಹಿಕ, ಮಾನಸಿಕ ಕಿರುಕುಳ ಆದಾಗ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ತಿಳಿಸಬೇಕು. ತೊಂದರೆ, ಕಿರುಕುಳ, ಹಲ್ಲೆ ಆದಾಗ ಭಯಪಡದೆ ಶಾಲೆಯ ಶಿಕ್ಷಕರಿಗೆ, ಪಾಲಕರಿಗೆ ಅದರಲ್ಲೂ ವಿಶೇಷವಾಗಿ ಮನೆಯಲ್ಲಿ ತಾಯಿಗೆ ಮಾಹಿತಿ ನೀಡಬೇಕು. ಇದು ಎಲ್ಲ ಮಕ್ಕಳಿಗೂ ಅನ್ವಯಿಸುತ್ತದೆ. ಬಾಲ್ಯವಿವಾಹ, ಒತ್ತಾಯದ ದುಡಿಮೆ ತಡೆಯಲು ನೇರವಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಮಕ್ಕಳಿದ್ದಾಗಲೇ, ಮನುಷ್ಯ ಮನುಷ್ಯನಾಗಿ ಹೇಗೆ ಬದುಕಬೇಕು ಎಂಬ ಅರಿವನ್ನು ಅವರಲ್ಲಿ ಮೂಡಿಸುವ ಅಗತ್ಯವಿದೆ. ಧಾರವಾಡ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆಗಳು ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ವರ್ಷಪೂರ್ತಿ ನಿರಂತರವಾಗಿ ಹಮ್ಮಿಕೊಳ್ಳುವದರಿಂದ ಮಕ್ಕಳಲ್ಲಿ ಬಾಲಾಪರಾಧ, ಬಾಲ ಕಾರ್ಮಿಕ ಪದ್ದತಿ ನಿμÉೀಧ, ಬಾಲ್ಯ ವಿವಾಹ ನಿμÉೀಧ, ಪೆÇೀಕ್ಸೊ ಮುಂತಾದ ಕಾಯ್ದೆಗಳ ಬಗ್ಗೆ ಮತ್ತು ಶೈಕ್ಷಣಿಕ ಹಕ್ಕುಗಳ ಬಗ್ಗೆ ಸಾಕಷ್ಟು ತಿಳುವಳಿಕೆ ಮೂಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಎಫ್ ದೊಡ್ಡಮನಿ ಅವರು, ದೇಶದಲ್ಲಿ ಬಡತನ ಮತ್ತು ಶಿಕ್ಷಣದ ಕೊರತೆಯಿಂದಾಗಿ ಬಾಲ ಕಾರ್ಮಿಕ ಪದ್ದತಿ ಇಂದಿಗೂ ಮುಂದುವರಿದೆ. ಮಕ್ಕಳ ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಕಡ್ಡಾಯ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಇದರ ಬಗ್ಗೆ ಅರಿವು ಮೂಡಿಸಬೇಕೆಂದು ಹೇಳಿದರು.