ಮಹಿಳಾ ಸುರಕ್ಷತೆ ಅರಿವು ಕಾರ್ಯಕ್ರಮ
ಧಾರವಾಡ,ಜೂ13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕವಿವಿ ವಿದ್ಯಾರ್ಥಿ ಕಲ್ಯಾಣ ವಿಭಾಗ, ಸ್ನಾತಕೋತ್ತರ ಕ್ರೀಡಾಕೂಟ ವಿಭಾಗ, ಮಹಿಳಾ ಸಂಶೋಧನಾ ಅಧ್ಯಯನ ಕೇಂದ್ರ, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಮಹಿಳಾ ಸುರಕ್ಷತೆ ಕುರಿತಂತೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ., ಅವರು ಮಾತನಾಡಿ, ವಿದ್ಯಾರ್ಥಿಗಳು, ತಮ್ಮ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ರೂಪಿಸಿಕೊಂಡರೆ, ಮುಂದಿನ ದಿನಮಾನಗಳಲ್ಲಿ ಉನ್ನತ ಸ್ಥಾನ ಪಡೆದು ಸಾಧಕರಾಗಬಹುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ ಅವರು ಮಾತನಾಡಿ, ಈಗೀನ ದಿನಮಾನಗಳಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಜೀವನದಲ್ಲಿ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆ ಅಂತಹ ಹೀನ ಕೃತ್ಯಗಳಿಗೆ ಒಳಗಾಗುತ್ತಿದ್ದಾರೆ. ಅಂತಹ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಆಪ್ತಸಮಾಲೋಚನೆ ಮಾಡಿ, ಮಾನಸಿಕ ಒತ್ತಡಿಂದ ದೂರವಿರಲು ನಮ್ಮ ಇಲಾಖೆಯಿಂದ “ಟೆಲಿ ಮಾನಸಾ” ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದರ ಸದುಪಯೋಗಪಡೆದುಕೊಂಡು ಮಹಿಳೆಯರು ಮತ್ತು ವಿದ್ಯಾರ್ಥಿಗಳು ಜಾಗೃತಿ ಹೊಂದುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ತಮ್ಮದಾಗಿಸಿಕೊಳ್ಳಬೆಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ, ಕರ್ನಾಟಕ ವಿಶ್ವವಿದ್ಯಾಲಯ ಕುಲಸಿಚಿವ ಚನ್ನಪ್ಪ ಎ. ಅವರು ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಸಮಯದಲ್ಲಿಯೂ ಸಹ ಎಂತಹ ಸಮಸ್ಯೆಗಳು ಎದುರಾದರೂ ಅವುಗಳನ್ನು ಎದುರಿಸಿ ನಿಲ್ಲುವ ಮನೋಭಾವನೆಯನ್ನು ಬೆಳೆಸಿಕೊಂಡು ವಿದ್ಯಾರ್ಥಿಗಳು ಜಾಗೃತಿ ವಹಿಸಿಬೆಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಿಬ್ಬಂದಿಗಳು, ಇಲಾಖೆಗಳ ಅಧಿಕಾರಿಗಳು, ಕವಿವಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.