ಬಾಲ ಕಾರ್ಮಿಕ ನಿರ್ಮೂಲನೆಗೆ ಜಾಗೃತಿ ಅಗತ್ಯ
ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.13: ಬಾಲ ಕಾರ್ಮಿಕ ಪದ್ಧತಿ ಅನಿಷ್ಟ ಪದ್ದತಿಯಾಗಿದ್ದು, ಇದರ ನಿರ್ಮೂಲನೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದೆ. ಎಲ್ಲ ಅಧಿಕಾರಿಗಳು, ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಕರೆ ನೀಡಿದರು.
ಬುಧವಾರ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿ ನಿμÉೀಧಿಸಲಾಗಿದೆ. ಇದೊಂದು ಅಪರಾಧವಾಗಿದೆ ಎಂಬುದರ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಿ, ಸಂಪೂರ್ಣ ನಿರ್ಮೂಲನೆಗೆ ಕೈ ಜೋಡಿಸಬೇಕು. ಬಾಲ ಕಾರ್ಮಿಕ ಪ್ರಕರಣಗಳು ಕಂಡು ಬಂದ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ – 1098ಕ್ಕೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಕಾರ್ಮಿಕ ಇಲಾಖೆಯು ಸೇರಿದಂತೆ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ರಕ್ಷಿಸಿದ ಮಕ್ಕಳನ್ನು ಬಾಲ ಮಂದಿರಕ್ಕೆ ದಾಖಲಿಸಿ ಅವರ ಪುನರ್ವಸತಿ ಕಲ್ಪಿಸಿ ಅವರಿಗೆ ಪೂರಕವಾದ ಶಿಕ್ಷಣ, ಕೌಶಲಗಳ ತರಬೇತಿ ಒದಗಿಸಲಾಗುತ್ತಿದೆ ಎಂದು ಹೇಳಿದರು.
ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಕ್ರೋಢೀಕರಿಸಿಕೊಂಡು ಆ ಬಗ್ಗೆ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಬಾಲ ಕಾರ್ಮಿಕ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಶಾಲಾ ಮುಖ್ಯಸ್ಥರೊಂದಿಗೆ ಸಮನ್ವಯ ಸಾಧಿಸಬೇಕು. ವಲಸೆ ಕಾರ್ಮಿಕ ಕುಟುಂಬಗಳ ಬಗ್ಗೆ ಮಾಹಿತಿ ಪಡೆÉದುಕೊಂಡು ಅವರ ಮಕ್ಕಳ ಶಿಕ್ಷಣ, ಮೂಲಭೂತ ಹಕ್ಕುಗಳ ಸಂರಕ್ಷಣೆ ಮಾಡಬೇಕು. ಮಕ್ಕಳ ಭವಿಷ್ಯ ಸುಂದರವಾಗಿಸಲು ಬಾಲ ಕಾರ್ಮಿಕ ಪದ್ಧತಿ ಪಿಡುಗನ್ನು ತೊಲಗಿಸಬೇಕು ಎಂದರು.
ಕಾರ್ಮಿಕ ನಿರೀಕ್ಷಕ ಜಗದೇವಿ ಸಜ್ಜನ ಬಾಲ ಕಾರ್ಮಿಕ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಾಮನಗೌಡ ಹಟ್ಟಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿÀ ನೀಲಮ್ಮಾ ಖೇಡಗಿ, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಎಸ್.ಜಿ. ಖೈನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೋ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಜಿ. ಕುಲಕರ್ಣಿ ಉಪಸ್ಥಿತರಿದ್ದರು.