ಎಲ್ಲ ಕಛೇರಿಗಳ ಮುಂದೆ ಲೋಕಾಯುಕ್ತ ನಾಮಫಲಕ ಕಡ್ಡಾಯವಾಗಿ ಅಳವಡಿಸಿ : ಎಸ್ಪಿ ಹಣಮಂತರಾಯ್
ಅಥಣಿ:ಜೂ.13: ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ಬೆಳಗಾವಿಯ ಲೋಕಾಯುಕ್ತ ಪೆÇಲೀಸ್ ವರಿಷ್ಠಾಧಿಕಾರಿ ಹಣಮಂತರಾಯ್. ನೇತೃತ್ವದಲ್ಲಿ ಬುಧವಾರ ಲೋಕಾಯುಕ್ತ ಕಾನೂನು ಅರಿವು ಮತ್ತು ಸಾರ್ವಜನಿಕರ ಕುಂದು ಕೊರತೆ ಪರಿಶೀಲಿಸಿ ಅಹವಾಲು ಸ್ವೀಕರಿಸಿದರು.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಎಸ್ ಪಿ ಹಣಮಂತರಾಯ್ ಸಭೆಯನ್ನ ಉದ್ದೇಶಿಸಿ ಮಾತನಾಡಿ ಸಾರ್ವಜನಿಕರ ಕೆಲಸಕ್ಕೆ ಅನಗತ್ಯ ವಿಳಂಬ ಮಾಡದೇ ನಿಗದಿತ ಅವಧಿಯಲ್ಲಿ ಮುಗಿಸಿಕೊಡಬೇಕು. ಸರ್ಕಾರಿ ಕಚೇರಿಯ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾವುದೇ ಅವ್ಯವಹಾರಕ್ಕೆ ಆಸ್ಪದ ನೀಡದೆ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜನರ ಕೆಲಸಕ್ಕೆ ವಿಳಂಬ ಮಾಡಿದರೆ ನೀರ್ದಾಕ್ಷಣ್ಯವಾಗಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ತಾಲೂಕ ಮಟ್ಟದ ಎಲ್ಲಾ ಕಚೇರಿಗಳ ಮುಂದೆ ಲೋಕಾಯುಕ್ತ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಒಳಗೊಂಡ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಸಾರ್ವಜನಿಕರು ಯಾವುದೇ ದೂರುಗಳನ್ನು ನೀಡಬೇಕಾದರೆ ನಮೂನೆ ನಂಬರ್ 1 ಮತ್ತು 2 ರಲ್ಲಿ ಸಮಗ್ರ ಮಾಹಿತಿಯನ್ನು ಒಳಗೊಂಡ ವಿವರವನ್ನು ನೀಡಬೇಕು. ಅಧಿಕಾರಿಗಳು ತಮ್ಮ ಕೆಲಸದಲ್ಲಿ ವಿಳಂಬ ಮಾಡುತ್ತಿದ್ದರೆ, ವಿನಾಕಾರಣ ತೊಂದರೆ ನೀಡುತ್ತಿದ್ದರೆ ತಾವು ನೇರವಾಗಿ ಇಲ್ಲವೇ ದೂರವಾಣಿ ಮೂಲಕ ದೂರು ನೀಡಬಹುದಾಗಿದೆ ಎಂದು ಹೇಳಿದರು.
ಅಥಣಿ ಪುರಸಭೆಗೆ ಸಂಬಂಧಿಸಿದಂತೆ ಕಸವಿಲೆವಾರಿಯಲ್ಲಿ ಆಗುತ್ತಿರುವ ವಿಳಂಬದ ಕುರಿತು ದೂರುಗಳು ಬಂದಿದ್ದು, ಮುಖ್ಯ ಅಧಿಕಾರಿಗಳು ಈ ಬಗ್ಗೆ ನಿಭಾಯಿಸಬೇಕೆಂದು ಸೂಚನೆ ನೀಡಿದರು. ಇದಲ್ಲದೆ ಸ್ಮಶಾನದ ಹತ್ತಿರ ಅಕ್ರಮವಾಗಿ ನಿರ್ಮಿಸಲಾದ ಗೂಡoಗಡಿಗಳನ್ನು ತೆರುವು ಗೋಳಿಸುವಂತೆ ದೂರು ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಶಿಸ್ತು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಅನಂತಪುರ ಮತ್ತು ಖಿಳೇಗಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ಶಾಲಾ ಶೌಚಾಲಯಗಳ ಕೊರತೆಯ ಕುರಿತು ದೂರುಗಳು ಬಂದಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತ್ವರಿತಗತಿಯಲ್ಲಿ ಶಾಲಾ ಮಕ್ಕಳಿಗೆ ತೊಂದರೆಯಾಗದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಅಥಣಿ ತಾಲೂಕಿನಲ್ಲಿ ಮರಳು ಮತ್ತು, ಕೃಷ್ಣಾ ನದಿ ತೀರದಲ್ಲಿನ ಮಣ್ಣು ಅಕ್ರಮವಾಗಿ ಸಾಗಾಣಿಕೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಪೆÇಲೀಸ್ ಇಲಾಖೆ ಅಧಿಕಾರಿಗಳು ಈ ಬಗ್ಗೆ ನಿಗಾವಹಿಸಿ ಶಿಸ್ತುಕ್ರಮ ಜರುಗಿಸಬೇಕೆಂದು ಹೇಳಿದರು.
ರೈತರ ಜಮೀನುಗಳ ಸರ್ವೆ ಕಾರ್ಯಕ್ಕೆ ಅಲ್ಲಲ್ಲಿ ತಂಟೆ ತಕರಾರುಗಳಾಗಿ ವಿಳಂಬವಾಗುತ್ತಿದ್ದು, ಭೂ ಮಾಪನ ಅಧಿಕಾರಿಗಳು ಪೆÇಲೀಸ್ ಭದ್ರತೆಯ ಸಹಕಾರದಿಂದ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕೆಂದು ಸೂಚಿಸಿದರು.
ತಾಲೂಕಿನ ವಿವಿಧ ಇಲಾಖೆಗಳಲ್ಲಿ ಮತ್ತು ಗ್ರಾಮ ಪಂಚಾಯತಿಗಳಲ್ಲಿ, ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಖಾಸಗಿ ಕಾರ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೂರುಗಳು ಬಂದಿದ್ದು, ಮತ್ತು ಭ್ರಷ್ಟಾಚಾರ ನಡೆಯುತ್ತಿರುವ ದೂರುಗಳು ಬಂದಿವೆ. ಆದ್ದರಿಂದ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಕೆಳವರ್ಗದ ನೌಕರರ ಮೇಲೆ ನಿಗಾ ವಹಿಸಬೇಕು ಸೂಚನೆ ನೀಡಿದರು.
ಈ ಸಭೆಯಲ್ಲಿ ಲೋಕಾಯುಕ್ತ ಡಿಎಸ್ ಪಿ ಬಿ ಎಸ್ ಪಾಟೀಲ, ಭರತ್ ರೆಡ್ಡಿ, ಸಿಪಿಐ ರವಿಕುಮಾರ ಧರ್ಮಟ್ಟಿ, ನಿರಂಜನ ಪಾಟೀಲ, ತಹಸೀಲ್ದಾರ್ ವಾಣಿ ಯು ಸೇರಿದಂತೆ ತಾಲೂಕ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
” ಸಭೆಯಲ್ಲಿ ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳು ಹೆಚ್ಚಾಗಿ ಬಂದಿದ್ದು, ಅವುಗಳನ್ನು ತಕ್ಷಣ ಬಗೆಹರಿಸುವಂತೆ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತಾಲೂಕ ಮಟ್ಟದ ಅನೇಕ ಇಲಾಖೆಗಳಲ್ಲಿ ಭ್ರಷ್ಟಾಚಾರದ ದೂರುಗಳು ಕೇಳಿ ಬರುತ್ತಿವೆ. ಗ್ರಾಮ ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ಹೋಗದೆ ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಾಲಯ ತೆರೆದಿರುವ ದೂರುಗಳು ಬಂದಿವೆ. ಆದ್ದರಿಂದ ತಾಲೂಕ ಮಟ್ಟದ ಅಧಿಕಾರಿಗಳು ತಮ್ಮ ಕೆಲವರು ನೌಕರರ ಬಗ್ಗೆ ನಿಗಾ ವಹಿಸುವಂತೆ ಸೂಚನೆ ನೀಡಿದ್ದೇನೆ. “