ನೀಟ್ ಪರೀಕ್ಷೆಯಲ್ಲಿ ಅವ್ಯವಹಾರ: ನಿಷ್ಪಕ್ಷಪಾತ ತನಿಖೆಗೆ ಎಸ್‍ಎಫ್‍ಐ ಆಗ್ರಹ
ಕಲಬುರಗಿ,ಜೂ.12-ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಎನ್‍ಟಿಎಯನ್ನು ರದ್ದುಪಡಿಸಬೇಕು ಮತ್ತು ಇದುವರೆಗಿನ ಅದರ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಎಸ್‍ಎಫ್‍ಐ ಜಿಲ್ಲಾ ಸಂಚಾಲಕಿ ಸುಜಾತ, ಜಿಲ್ಲಾ ಮುಖಂಡರಾದ ಪ್ರೇಮ್, ರಾಹುಲ್, ಹುಲಗಮ್ಮ, ಮಾಲಾಶ್ರೀ, ನಾಗಮ್ಮ, ವಿಶ್ವರಾಜ, ದರ್ಶನ್, ವೀರೇಶ್, ನಾಗರಾಜ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.