ಕಲಬುರಗಿ ಜಿಲ್ಲೆಯಾದ್ಯಂತ ವರುಣನ ಆರ್ಭಣ
ಕಲಬುರಗಿ,ಜೂ.12-ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಹಲವು ಕಡೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಜಮೀನುಗಳಿಗೆ ನೀರು ನುಗ್ಗಿದೆ. ಕೆಲವು ಕಡೆ ಸೇತುವೆಗಳು ಮುಳುಗಿವೆ.
ಜಿಲ್ಲೆಯ ಆಳಂದ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗಿದೆ. ಆಳಂದ ಪಟ್ಟಣದ ಹೊರವಲಯದಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹಳ್ಳಗಳು ತುಂಬಿದ ಕಾರಣ ಜಮೀನುಗಳಿಗೆ ನೀರು ನುಗ್ಗಿದೆ.
ಬೋಧನ ಗ್ರಾಮದಲ್ಲಿ ಕೆರೆ ಹಳ್ಳಗಳು ತುಂಬಿದ್ದು, ಬೋಧನ-ಕಮಲಾನಗರ ಮಧ್ಯೆ ಇರುವ ಸೇತುವೆ ಮುಳುಗಡೆಯಾಗಿದೆ. ಕಲಬುರಗಿ-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಕಮಲಾಪುರ ತಾಲ್ಲೂಕಿನ ಅಂಬಲಗಾ ಗ್ರಾಮದಲ್ಲಿ ಗಂಡೋರಿ ನಾಲಾ, ಹಳ್ಳದ ನೀರು ಜಮೀನಿನೊಳಗೆ ನುಗ್ಗಿ ಬಿತ್ತನೆ ಮಾಡಿದ ಬೀಜ, ಗೊಬ್ಬರ, ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. ಮಳೆಯಿಂದ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್‍ನ ಕಲ್ಯಾಣ ಕರ್ನಾಟಕ ಕಿಸಾನ್ ಘಟಕದ ಅಧ್ಯಕ್ಷ ಶಿವಪುತ್ರಪ್ಪ ಬಿ.ಮೋಗಪ್ಪಗೋಳ ಒತ್ತಾಯಿಸಿದ್ದಾರೆ.
ಮುಂದುವರೆದ ವರುಣನ ಆರ್ಭಟ
ತುಂಬಿದ ಕೆರೆ ಹಳ್ಳ ಕೊಳ್ಳ
ಜಮೀನುಗಳಿಗೆ ನುಗ್ಗಿದ ನೀರು
ಕೆಲವು ಕಡೆ ಸೇತುವೆ ಮುಳುಗಡೆ
ಜನಜೀವನ ಅಸ್ತವ್ಯಸ್ತ