ಪ್ರವಾಹ-ಅತಿವೃಷ್ಟಿಯಂತಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿರಿ : ಮನೋಜ್ ಜೈನ್
ಯಾದಗಿರಿ : ಜೂ.12 : ಮುಂಬರುವ ದಿನಗಳಲ್ಲಿ ಪ್ರವಾಹ ಮತ್ತು ಅತಿವೃಷ್ಟಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.