ಸಿದ್ದು ಮುಂದುವರಿಕೆ -ಸತೀಶ್
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಸೆ.೨೫:ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ಅನಾವಶ್ಯಕ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ಜಾರಕಿಹೊಳಿ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟಿನ ತೀರ್ಪಿನ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಯಾವುದೇ ಒತ್ತಾಯವಿಲ್ಲ. ಅವರ ಬದಲಾವಣೆ ಪ್ರಶ್ನೆಯೇ ಇಲ್ಲ. ಎಲ್ಲದ್ದಕ್ಕೂ ರಾಜೀನಾಮೆ ಪರಿಹಾರವಲ್ಲ ಎಂದರು.
ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲ ಶಾಸಕರು ಮುಖ್ಯಮಂತ್ರಿಗಳ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟ ಮುಂದುವರೆಯುತ್ತದೆ ಎಂದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರವರೇ ಮುಂದುವರೆಯಲಿರುವುದರಿಂದ ದಲಿತ ಸಿಎಂ ಚರ್ಚೆ ಅನವಶ್ಯಕ ಎಂದು ಅವರು ಹೇಳಿದರು.