ಚನ್ನಮ್ಮನ ವಿಜಯೋತ್ಸವ ಅಂತರ್ರಾಷ್ಟ್ರೀಯ ಉತ್ಸವವಾಗಿ ಆಚರಿಸಲು ಸಿದ್ಧತೆ
ಚನ್ನಮ್ಮನ ಕಿತ್ತೂರು, ಸೆ 25: ಚನ್ನಮ್ಮನ ವಿಜಯೋತ್ಸವ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಚನ್ನಮ್ಮನ ಕಿತ್ತೂರು ಉತ್ಸವವನ್ನು ವಿಶ್ವ ಮಟ್ಟದ ಕಾರ್ಯಕ್ರಮವನ್ನಾಗಿ ಅದ್ದೂರಿಯಾಗಿ ಆಚರಿಸಲಾಗುವುದು. ಅದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಪಟ್ಟಣದ ಶೆಟ್ಟರ ಕಲ್ಯಾಣ ಮಂಟಪದಲ್ಲಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಾಯುವ್ಯ ಕರ್ನಾಟಕ ಸಾರಿಗೆ ಹೆಸರನ್ನು `ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ’ ಎಂದು ನಾಮಕರಣಕ್ಕೆ ಹಾಗೂ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಬದಲಾಗಿ “ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ’ ಎಂದು ಮರುನಾಮಕರಣಕ್ಕಾಗಿ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಉತ್ಸವದ ನೆನಪಿಗಾಗಿ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಉತ್ಸವದ ಮೆರವಣಿಗೆಯಲ್ಲಿ ಕೇವಲ ನಂದಿ ಧ್ವಜಕ್ಕೆ ಅನುಮತಿಸಲಾಗುವುದು. ಅಕ್ಟೋಬರ್ 23ರಂದು ಜರುಗಲಿರುವ ಉತ್ಸವದಲ್ಲಿ ರಾಷ್ಟ್ರಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವದು.
ಈ ಬಾರಿಯ ಉತ್ಸವದ ಅಂಗವಾಗಿ ಏರ್ ಶೋ ಆಯೋಜನೆಗಾಗಿ ಕೇಂದ್ರ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಲಾಗಿದೆ. ಏರ್ ಶೋ ನಡೆಯುವ ವಿಶ್ವಾಸ ಸವಿದೆ. ಉತ್ಸವದ ಅಂಗವಾಗಿ ಪಾರಂಪರಿಕ ಕ್ರೀಡೆಗಳ ಆಯೋಜನೆಗೆ ಪಟ್ಟಿ ತಯಾರಿಸಲಾಗುತ್ತಿದ್ದು, ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಆಯೋಜನೆಗೆ ಚಿಂತಿಸಲಾಗುವದು ಎಂದರು.
ಸಭೆ ನೇತೃತ್ವ ವಹಿಸಿಕೊಂಡು ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಮುಖ್ಯಮಂತ್ರಿಯವರು, ಜಿಲ್ಲಾಉಸ್ತುವಾರಿ ಸಚಿವರು ಇವರ ಶ್ರಮದಿಂದ ಉತ್ಸವಕ್ಕೆ ಸರ್ಕಾರದಿಂದ 5 ಕೋಟಿ ಅನುದಾನ ದೊರಕಿತ್ತು. ಉತ್ಸವ ವಿಜೃಂಭಣೆಯಿಂದ ಆಚರಿಸಲು ಎಲ್ಲ ಸಿದ್ಧತೆ ತಯಾರಿ ನಡೆದಿದ್ದು. ಯುವ ಅಧಿಕಾರಿಗಳ ನೇತೃತ್ವದಲ್ಲಿ ಹುಮಸ್ಸಿನಿಂದ ಉತ್ಸವ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಉತ್ಸವದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಉತ್ಸವದ ಯಶಸ್ವಿಗೆ ಸಾರ್ವಜನಿಕರ ಪಾಲ್ಗೊಳುವಿಕೆ ಹಾಗೂ ಜವಾಬ್ದಾರಿ ಅಷ್ಟೇ ಮಹತ್ವದ್ದಾಗಿದೆ. ಉತ್ಸವದ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು.
ಸಾನಿಧ್ಯ ವಹಿಸಿ ಮಾತನಾಡಿದ ಕಲ್ಮಠದ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮಿಜಿ, ಈ ಬಾರಿಗೆ ವಿಜಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸುವುದು ಸರಕಾರದ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯು ಆಗಿದೆ. ಉತ್ಸವ ಸ್ಮರಣೀಯ ಉತ್ಸವವಾಗಬೇಕು ಎಂದರು.
ಈ ವೇಳೆ ಜಿಪಂ ಸಿ.ಇ.ಓ ರಾಹುಲ್ ಶಿಂಧೆ, ಜಿಲ್ಲಾ ಪೆÇಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ದಿನೇಶಕುಮಾರ ಮೀನಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕರು ವಿದ್ಯಾವತಿ ಭಜಂತ್ರಿ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂಪಗಾಂವಿ, ಕಿತ್ತೂರು ತಹಶೀಲ್ದಾರ ರವೀಂದ್ರ ಹಾದಿಮನಿ, ಹನಮಂತ ಶಿರಹಟ್ಟಿ, ತಾಪಂ ಇಓ ಕಿರಣ ಗೋರ್ಪಡೆ, ಕೆಎಸ್‍ಆರ್‍ಟಿಸಿ ಜಿಲ್ಲಾಧಿಕಾರಿ ರಾಜೇಂದ್ರ ಹುದ್ದಾರ, ನಾನಾಸಾಹೇಬ ಪಾಟೀಲ, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಪಪಂ ಸರ್ವಸದಸ್ಯರು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.