ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್
ಯಾದಗಿರಿ.ಸೆ.೨೫- ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಸೆ.೨೧ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಮುಸ್ಲಿಮರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ. ಹಿಂದೂಗಳು ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ. ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಹಾಕಲು ಬರುವುದಿಲ್ಲವೇ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು.
ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದಿದ್ದರು. ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಹಾಪುರ ಪಿಎಸ್‌ಐ ಡಿ.ವಿ.ನಾಯಕ ಅವರಿಂದ ಸ್ವಕೃತ ದೂರು ದಾಖಲಾಗಿದೆ. ಬಿಎನ್‌ಎಸ್ ಕಾಯ್ದೆಯಡಿ ೨೯೯, ೧೯೨ ಕಾಯ್ದೆಯಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ೫ ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.