ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸಿಬಿಜೆಪಿ ಪ್ರತಿಭಟನೆ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಸೆ.25: ಮುಡಾ ಹಗರಣದ ತನಿಖೆಗೆ  ರಾಜ್ಯಪಾಲರು ನೀಡಿದ ಆದೇಶ ಸರಿಯಾಗಿದೆಂದು ಹೈ ಕೋರ್ಟ್ ಹೇಳಿದ್ದು. ನೈತಿಕತೆಯಿಂದ  ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ‌ಸ್ಥಾನಕ್ಕೆ  ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು  ಒತ್ತಾಯಿಸಿ ಬಿಜೆಪಿಯಿಂದ  ನಗರದಲ್ಲಿ ನಿನ್ನೆ ಸಂಜೆ ಪ್ರತಿಭಟನೆ ನಡೆಸಲಾಯ್ತು.
ನಗರದ  ಗಡಗಿ ಚೆನ್ನಪ್ಪ ಸರ್ಕಲ್ ನಲ್ಲಿ  ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಪಕ್ಷದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸೇರಿ ಪ್ರತಿಭಟನೆ ನಡೆಸಿದರು.
ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿ, ರಾಜಕೀತದ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ, ಈಗ ನೈತಿಕ ಹೊಣೆ ಹೊತ್ತು  ಕೂಡಲೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.‌
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರುಗಳಾದ ಮಾರುತಿ ಎಸ್.ಪ್ರಸಾದ್, ಹೆಚ್ಮಹನುಂಮತಪ್ಪ, ಎಸ್.ಮಲ್ಲನಗೌಡ, ಅರುಣಾಚಲಂ, ಶರಣ, ರಾಜಶೇಖರ ಮೊದಲಾದವರು ಪಾಲ್ಗೊಂಡಿದ್ದರು.
l