ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.೧೨ : ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು  ದಾವಣಗೆರೆ ಜಿಲ್ಲೆ ಸೇರಿದಂತೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆಯನ್ನು ತಮ್ಮ ಗೃಹ ಕಚೇರಿಯಲ್ಲಿ ನಡೆಸಿದರು. ಚುನಾವಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ನೇತೃತ್ವ ವಹಿಸಿ ಶಾಸಕರ ಜೊತೆಗೂಡಿ ಕಾರ್ಯಕರ್ತರು ಮತ್ತು ಮುಖಂಡರನ್ನು ಒಗ್ಗೂಡಿಸಿ ಪಕ್ಷದ ಗೆಲುವಿಗೆ ಕಾರಣಕರ್ತರಾಗಿರುವುದಕ್ಕೆ ಪ್ರಸಂಶೆ ವ್ಯಕ್ತಪಡಿಸಿದರು.ಕೆಲವು ಭಾಗಗಳಲ್ಲಿ ಪ್ರಚಾರ ವೇಳೆ ಉತ್ತಮ ಪ್ರಕ್ರಿಯೆ ವ್ಯಕ್ತವಾದರೂ ಸಹ ಮತದಾನದಲ್ಲಿ ವ್ಯತ್ಯಾಸ ಕಂಡುಬಂದಿದ್ದು ಇದಕ್ಕೆ ಕಾರಣ ಏನು ಎಂಬುದನ್ನು ಸ್ಥಳೀಯ ಮಟ್ಟದಲ್ಲಿ ಗುರುತಿಸುವಂತೆ ನೂತನ ಸಂಸದರು ಅಧ್ಯಕ್ಷ ಗಳಿಗೆ ಸೂಚಿಸಿದರು.ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಜನಪರ ಕೆಲಸಗಳಿಗೆ ಜನರು ಚುನಾವಣಾ ಪ್ರಚಾರದ ವೇಳೆ ಪ್ರಶಂಸೆ ವ್ಯಕ್ತಪಡಿಸಿದ್ದು, ಕಂಡುಬಂದರೂ ಸಹ ಮತದಾನದಲ್ಲಿ ವ್ಯತ್ಯಾಸವಾಗಿರುವ ಬಗ್ಗೆ ರಾಹುಲ್ ಗಾಂಧಿ ಅವರು ಆತಂಕ ವ್ಯಕ್ತಪಡಿಸಿದ್ದು ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದ್ದಾರೆ ಎಂದರು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಹರಿಹರ ವಿಧಾನಸಭೆ ಕಾಂಗ್ರೆಸ್ ಅಭ್ಯರ್ಥಿ ನಂದಿಗಾವಿ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗೋವಿಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಯೂಬ್ ಪೈಲ್ವಾನ್, ಬಿ.ಕೆ. ಪರಶುರಾಮ್, ಜಿ.ಸಿ.ನಿಂಗಪ್ಪ, ಕಮ್ಮತಳ್ಳಿ ಮಂಜುನಾಥ್, ಕುಬೇರಪ್ಪ, ಎಂ.ವಿ. ಅಂಜಿನಪ್ಪ, ಎಲ್ .ಬಿ .ಹನುಮಂತಪ್ಪ, ಜಬೀವುಲ್ಲಾ, ಶ್ರೀನಿವಾಸ್, ಅಬಿದ್ ಅಲಿ,  ಬಿ.ಜಿ. ನಾಗರಾಜ್, ಶಂಶಿರ್ ಅಹಮದ್ ಮತ್ತಿತರರು ಭಾಗವಹಿಸಿದ್ದರು.