ಅಪರಿಚಿತ ವ್ಯಕ್ತಿ ಶವ ಪತ್ತೆ
ಕಲಬುರಗಿ,ಜೂ.12-ನಗರದ ಸುಪರ್ ಮಾರ್ಕೆಟ್‍ನ ಪ್ರಕಾಶ್ ಮಾಲ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.
50 ರಿಂದ 55 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸುದ್ದಿ ತಿಳಿದು ಚೌಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.