ಜೂನ್ 14 ರಂದು ಎಸ್.ಎಸ್.ಎಲ್.ಸಿ-2 ಪರೀಕ್ಷೆ
ಧಾರವಾಡ,ಜೂ12: ಜೂನ್ 14 ರಂದು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2 ಜರುಗಲಿದ್ದು, ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ಏಳು ತಾಲೂಕುಗಳ 7469 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2 ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2 ಕುರಿತು ಪೂರ್ವಭಾವಿ ಸಭೆ ಜರುಗಿಸಿ, ಮಾತನಾಡಿದರು.