ಶಾಲಾ ಕಟ್ಟಡದ ಕಾಮಗಾರಿಗೆ ಶಂಕು ಸ್ಥಾಪನೆ
ಕೆ.ಆರ್.ಪುರ, ಜೂ.೧೨- ಕ್ಷೇತ್ರದ ಬಾಬುಸಾಪಾಳ್ಯದಲ್ಲಿ ನೂತನ ಶಾಲಾ ಕಟ್ಟಡದ ನಿರ್ಮಾಣ ಕಾಮಗಾರಿಗೆ ಶಾಸಕ ಬಿ.ಎ.ಬಸವರಾಜ ಅವರು ಶಂಕುಸ್ಥಾಪನೆ ನೇರವೇರಿಸಿದರು.
ಶಂಕುಸ್ಥಾಪನೆ ಮಾಡಿ ಮಾತನಾಡಿದ ಶಾಸಕ ಬಿ.ಎ.ಬಸವರಾಜ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಕೈಜೋಡಿಸಬೇಕೆಂದು ಮನವಿ ಮಾಡಿದರು.
ಸರ್ಕಾರಿ ಶಾಲೆಗಳಿಂದ ಕಲಿತ ಹಲವರು ಪ್ರತಿಷ್ಠಿತ ಸ್ಥಾನಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದು,ಸರ್ಕಾರಿ ಶಾಲೆಗಳ ಅಭಿವೃದ್ಧಿ ನಮ್ಮೆಲ್ಲರ ಜವಾಬ್ದಾರಿ ಎಂದು ನುಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಇಲಾಖೆ ಹಾಗೂ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮಕ್ಕಳ ಉಜ್ವಲ ಭವಿಷ್ಯಕ್ಕೆ ಭದ್ರಬುನಾದಿ ನಿರ್ಮಿಸುವಂತೆ ಸೂಚಿಸಿದರು.
ಸರ್ಕಾರಿ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ನಾನು ಹಲವು ಯೋಜನೆಗಳನ್ನು ರೂಪಿಸಿದ್ದು,ಹಲವು ಶಾಲೆಗಳನ್ನು ಖಾಸಗಿ ಸಹಯೋಗದೊಂದಿಗೆ ಹೈಟೆಕ್ ಮಾದರಿಯಲ್ಲಿ ನಿರ್ಮಾಣ ಮಾಡಿದ್ದೇನೆ ಎಂದು ನುಡಿದರು.
ಈ ಸಂದರ್ಭದಲ್ಲಿ ಬಿಇಓ ರಾಮಮೂರ್ತಿ, ಕೆ.ಆರ್.ಪುರ ಮಂಡಲ ಅಧ್ಯಕ್ಷ ಮುನೇಗೌಡ, ಮುಖಂಡರಾದ ಬಿ.ಎ.ಗಣೇಶ್ ಡಿವಿಎನ್ ಮಂಜುನಾಥ, ನರಸಿಂಹಮೂರ್ತಿ, ಬಿ.ಎಂ.ಕೃಷ್ಣ,ಮುನಿರಾಜು,ಸಂಪತ್ ಕುಮಾರ್,ಗಣೇಶ ರೆಡ್ಡಿ,ಮುನಿಸ್ವಾಮಿ, ವೆಂಕಟೇಶ್ ಇದ್ದರು.