ಯೋಗವು ಜೀವನ ಪದ್ಧತಿ ಆಗಬೇಕು: ಜಿಲ್ಲಾಧಿಕಾರಿ
ಧಾರವಾಡ,ಜೂ12: ನಿತ್ಯ ಮಾಡುವ ಯೋಗ ಅನೇಕ ರೋಗಗಳ ಪರಿಹಾರಕ್ಕೆ ಉತ್ತಮ ಮಾರ್ಗವಾಗಿದೆ. ಯೋಗವನ್ನು ಜೀವನ ಪದ್ಧತಿಯಾಗಿ ಅಳವಡಿಸಿಕೊಳ್ಳುವದರಿಂದ ಸದೃಡ ದೇಹ ಮತ್ತು ಆರೋಗ್ಯವಂತ ಮನಸ್ಸು ಹೊಂದಲು ಸಾಧ್ಯವಾಗುತ್ತದೆ. ಆಯುಷ ಇಲಾಖೆ ಯೋಗದ ಜನಪ್ರೀಯತೆಗೆ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಆಯುಷ ಇಲಾಖೆ ಜಿಲ್ಲಾ ಆಯುಷ ಅಧಿಕಾರಿ ಡಾ.ಗಣೇಶ ಕಬಾಡೆ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.