ದಸರಾ ಆನೆ ಅಶ್ವತ್ಥಾಮ ಇನ್ನಿಲ್ಲ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.12:- ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ(38) ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೇವು ಹರಸಿ ಕಾಡಿಗೆ ತೆರಳಿದ್ದ ವೇಳೆ ಸೋಲಾರ್ ಬೇಲಿ ವಿದ್ಯುತ್ ಪ್ರವಹಿಸಿ ದಸರಾ ಆನೆ 38 ವರ್ಷದ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಶ್ವತ್ಥಾಮ ಆನೆ ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. 2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನ ಸೆರೆ ಹಿಡಿಯಲಾಗಿತ್ತು. ಶಾಂತಿ ಹಾಗೂ ಗಾಂಭಿರ್ಯಕ್ಕೆ ಅಶ್ವತ್ಥಾಮ ಆನೆ ಹೆಸರುವಾಸಿಯಾಗಿತ್ತು.