ಬಸ್ ಪಾಸ್ ವಿತರಣೆಗೆ ಕ್ರಮ- ಸಚಿವರ ಭರವಸೆ
ಕೋಲಾರ,ಜೂ,೧೨-ರಾಜ್ಯದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಯಲ್ಲಿ ಅಗುತ್ತಿರುವ ಲೋಪದೋಷಗಳನ್ನು ಶೀಘ್ರದಲ್ಲಿಯೇ ಸರಿ ಪಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು,
ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘದ ( ಕೆ.ಯು.ಡಬ್ಲೂ.ಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ರಾಜ್ಯದ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆಯಲ್ಲಿ ಉಂಟಾಗಿರುವ ವಿಳಂಭ ಧೋರಣೆ ಕುರಿತು ಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ ಮಾತನಾಡಿ ರಾಜ್ಯದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆಯಲ್ಲಿ ಸಂಸ್ಥೆಯ ಆಡಳಿತದಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ ಕೊಡಲೇ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು,
ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಕಳೆದ ಬಜೆಟ್‌ನಲ್ಲಿ ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆಯನ್ನು ಮಾಡುವುದಾಗಿ ಘೋಷಿಸಿದ್ದರು, ಅದರಂತೆ ಶೀಘ್ರವಾಗಿ ಬಸ್ ವಿತರಣೆಯನ್ನು ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ನಮ್ಮ ಸಂಸ್ಥೆಗೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು,