ಬಿಜೆಪಿ-ಜೆಡಿಎಸ್‌ನ ವಿಜಯೋತ್ಸವ ಆಚರಣೆ
ಕೋಲಾರ,ಜೂ,೧೨-ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನಗರದ ಡೂಂಲೈಟ್ ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ, ಕಳೆದ ಹತ್ತು ವರ್ಷದಿಂದ ದೇಶದಲ್ಲಿ ಮೋದಿ ಜನಪರವಾದ ಆಡಳಿತ ನಡೆಸಿದ್ದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ ರಾಷ್ಟ್ರದ ಇತಿಹಾಸದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
ಮೋದಿ ಆಡಳಿತವನ್ನು ದೇಶದ ಜನರು ಮೆಚ್ಚಿ ಮತ್ತೊಮ್ಮೆ ಬಿಜೆಪಿಗೆ ಅವಕಾಶ ದೇಶದ ಜನತೆ ಜನಾದೇಶ ನೀಡಿರುವುದು ಅಬಿನಂದಾನರ್ಹವಾಗಿದೆ. ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತ ಮುಕ್ತಗೊಳಿಸ ಬೇಕಾಗಿದೆ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಮೈತ್ರಿಯಾಗಿಯೇ ಎದುರಿಸಲಿದೆ ಎಂದರು.
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ, ದೇಶ ಮುನ್ನಡೆಯಲು ಮೋದಿ ಪ್ರಧಾನಿಯಾಗಬೇಕು ಎನ್ನುವ ಆಕಾಂಕ್ಷೆಯು ರಾಷ್ಟ್ರದ ಜನತೆ ಕಂಡ ಕನಸಾಗಿತ್ತು ಅದನ್ನು ನನಸು ಮಾಡುವ ಮೂಲಕ ಹೊಸ ಇತಿಹಾಸವನ್ನು ದಾಖಲು ಮಾಡಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಹೇಳಿದರು,
ಮುಂಬರುವ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಳಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಭರವಸೆ ನೀಡಿದರಲ್ಲದೆ ಕೇಂದ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರದೆಯೊಂದರ ಮೇಲೆ ಪ್ರಮಾಣವಚನದ ನೇರ ಪ್ರಸಾರ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು.
ವಿಶೇಷವಾಗಿ ಕುಮಾರಸ್ವಾಮಿ ಸಚಿವ ಸ್ಥಾನದ ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ಸಾರ್ವಜನಿಕರಿಂದ ಶಿಳ್ಳೆ, ಚಪ್ಪಾಳೆ, ಜಯಕಾರದ ಘೋಷಣೆಗಳು ಕೊಗುವ ಮೂಲಕ ಹರ್ಷ ವ್ಯಕ್ತಪಡಿಸಿದರು
ವಿಜಯೋತ್ಸವದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ತಿಮ್ಮರಾಯಪ್ಪ. ನಾಗೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಅರುಣಮ್ಮ, ನಗರಸಭಾ ಸದಸ್ಯ ಜೆ.ಡಿ.ಎಸ್. ರಾಕೇಶ್, ಟೆಲ್ಲಿ ಮಂಜು, ರಾಜೇಶ್ ಸಿಂಗ್, ಮುಖಂಡರಾದ ಸಾ.ಮಾ ಬಾಬು, ನಾಮಾಲ್ ಮಂಜು, ಬಾಲಾಜಿ, ಅಪ್ಪಿ, ಚಂಬೆ ರಾಜೇಶ್, ದಿಂಬ ನಾಗರಾಜಗೌಡ, ಶಿವಕುಮಾರ್ ಮುಂತಾದವರು ಇದ್ದರು.