ಚಿಕ್ಕೋಡಿ ನೂತನ ಸಂಸದೆ ಪ್ರಿಯಾಂಕ ಚಾರಕಿಹೊಳಿ ಅವರಿಗೆ ಹೊಂಗನೂರು ಚಂದ್ರು ಸನ್ಮಾನ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ. 12- ಚಿಕ್ಕೋಡಿ ಲೋಕಾಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕ ಚಾರಕಿಹೊಳೆ ಅವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೊಂಗನೂರು ಚಂದ್ರು ಸನ್ಮಾನಿಸಿದರು.
ಮೈಸೂರಿಗೆ ಆಗಮಿಸಿದ್ದ ನೂತನ ಸಂಸದೆ ಪ್ರಿಯಾಂಕ ಚಾರಕಿಹೊಳಿ ಅವರನ್ನು ಜಿಲ್ಲೆಯ ಜನತೆಯ ಪರವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೊಂಗನೂರು ಚಂದ್ರು ಶಾಲು ಹೊದಿಸಿ, ಪುಷ್ಪ ಗುಚ್ಚ ನೀಡಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದೆ ಪ್ರಿಯಾಂಕ ಚಾರಕಿಹೊಳಿ ಅವರು, ಮೈಸೂರು- ಚಾಮರಾಜನಗರ ಜಿಲ್ಲೆಯ ನಾಯಕ ಸಮುದಾಯದ ಬಂಧುಗಳು ನಮ್ಮ ತಂದೆ ಸತೀಶ ಚಾರಕಿಹೊಳಿ ಅವರು ಹಾಗೂ ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದೇನೆ. ಚುನಾವಣಾ ಸಂದರ್ಭದಲ್ಲಿ ಎರಡು ಜಿಲ್ಲೆಯ ಕಾಂಗ್ರೆಸ್ ಮುಖಂಡರು, ನಮ್ಮ ತಂದೆಯವರ ಹಿತೈಷಿಗಳು, ಅಭಿಮಾನಿಗಳು, ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷ ಹಾಗೂ ನನ್ನ ಪರವಾಗಿ ಪ್ರಚಾರ ಮಾಡಿ, ಗೆಲುವಿಗೆ ಹೆಚ್ಚಿನ ಸಹಕಾರ ನೀಡಿದ್ದೀರಿ. ಮುಂದಿನ ದಿನಗಳಲ್ಲಿ ನಿಮ್ಮೇಲ್ಲರ ಸಹಕಾರದಿಂದ ಉತ್ತಮ ಕೆಲಸ ಕಾರ್ಯಗಳನ್ನು ಮಾಡೋಣ. ಯಾವುದೇ ಸಮಸ್ಯೆಗಳಿದ್ದರು ನಮ್ಮ ತಂದೆಯವಾದ ಸತೀಶ್ ಚಾರಕಿಹೊಳಿ ಅವರು ಹಾಗು ನಾನು ನಿಮ್ಮೊಂದಿಗಿರುತ್ತೇವೆ ಎಲ್ಲರು ಒಗ್ಗಟ್ಟಿನಿಂದ ಸಮಾಜ ಕಟ್ಟುವ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡೋಣ ಎಂದರು.
ಗ್ಯಾರಂಟಿ ಅನುಷ್ಥಾನ ಪ್ರಾಧಿಕಾರದ ಅಧ್ಯಕ್ಷ ಹೊಂಗನೂರು ಚಂದ್ರು ಮಾತನಾಡಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಹಾಗೂ ನಾಯಕ ಸಮುದಾಯದ ಬೆಳವಣಿಗೆಯ ವಿಚಾರದಲ್ಲಿ ಹೆಚ್ಚಿನ ಅಸಕ್ತಿ ವಹಿಸಬೇಕು. ಚಿಕ್ಕೊಡಿ ಕ್ಷೇತ್ರದ ಅಭಿವೃದ್ದಿ ಜೊತೆಗೆ ರಾಜ್ಯಾದ್ಯಂತ ಪ್ರವಾಸ ಮಾಡಿ, ಸಮುದಾಯ,ಕಾಂಗ್ರೆಸ್ ಪಕ್ಷದ ನಾಯಕಿಯಾಗಿ ತಾವು ತಂದೆಯಂತೆ ರಾಜಕೀಯ ಕ್ಷೇತ್ರದಲ್ಲಿ ಬೆಳೆಯಲು ಹೆಚ್ಚಿನ ಅವಕಾಶವಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಂಪನಪುರ ಗ್ರಾ.ಪಂ.ಅಧ್ಯಕ್ಷ ಮಹೇಶ್, ಅಂಬಳೆ ಗ್ರಾ.ಪಂ. ಮಾಜಿ ಅಧ್ಯಕ್ಷ ಸಿದ್ದನಾಯಕ, ಗ್ರಾ.ಪಂ. ಸದಸ್ಯ ಸೋಮಣ್ಣ, ಗುಂಬಳ್ಳಿ ರಾಜಣ್ಣ, ಗ್ರಾ.ಪಂ.ಮಾಜಿ ಸದಸ್ಯ ನಂಜುಂಡನಾಯಕ, ಇತರರು ಇದ್ದರು.