ಆಸ್ತಿ ತೆರಿಗೆ ಮೇಲೆ ಶೇ. 5 ರಷ್ಟು ರಿಯಾಯಿತಿನೀಡಿದ ಕಾಲಾವಧಿ ಜು. 31 ರವರೆಗೆ ವಿಸ್ತರಣೆ
ಕಲಬುರಗಿ:ಜೂ.10:ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ ಕಲಂ 112(ಎ)(1) ರನ್ವಯ ಪ್ರತಿ ಹಣಕಾಸು ವರ್ಷ ಪ್ರಾರಂಭವಾದ ಮೊದಲ ತಿಂಗಳಿನಲ್ಲಿ ಚಾಲ್ತಿ ವರ್ಷದ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ, ಆಸ್ತಿ ತೆರಿಗೆ ಮೇಲೆ ಶೇ. 5 ರಷ್ಟು ರಿಯಾಯಿತಿ ನೀಡಿದ ಕಾಲಾವಧಿಯನ್ನು 2024ರ ಜುಲೈ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾದ ಭವನೇಶ ದೇವಿದಾಸ್ ಪಾಟೀಲ ಅವರು ತಿಳಿಸಿದ್ದಾರೆ.