ಅಶ್ವಥನಾರಾಯಣಗೆ ಬೀಳ್ಕೊಡುಗೆ
ಕೋಲಾರ,ಜೂ,೧೦- ತಾಲೂಕಿನ ಶಾಪೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಗೌಡಹಳ್ಳಿ ಅಶ್ವಥನಾರಾಯಣನಿವೃತ್ತಿಯಾದ ಹಿನ್ನಲೆಯಲ್ಲಿ ಕೋಲಾರದ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ಅಭಿನಂದಿಸಿದರು.
ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಬಿಇಓ ಕನ್ನಯ್ಯ, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಬಾಬು, ನಿಕಟ ಪೂರ್ವ ಅಧ್ಯಕ್ಷ ಕೆ.ಎನ್.ಮಂಜುನಾಥ್, ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಅಪೇಗೌಡ, ಗೆಳೆಯರ ಬಳಗದ ಜಿಲ್ಲಾಧ್ಯಕ್ಷ ಎಸ್.ನಾರಾಯಣಸ್ವಾಮಿ ಕಾರ್ಯದರ್ಶಿ ವೆಂಕಟಾಚಲಪತಿ ಗೌಡ ಇದ್ದರು.