ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ
ಹೊನ್ನಾಳಿ.ಜೂ.೯: ನಿಸರ್ಗದತ್ತವಾದ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕಿತ್ತೂರ್ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತರಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಗೌಡ  ಹೇಳಿದರು, ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರ್ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವುದರ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು ಗಿಡಗಳನ್ನು ನೆಡುವುದರ ಜೊತೆಯಲ್ಲಿ ಗಿಡಗಳನ್ನು ಪೋಷಣೆ ಮಾಡುವುದು ಸಹ ಮುಖ್ಯವಾಗಿದೆ.  ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈಸರ್ಗಿಕ ಪರಿಸರದ ವಾತಾವರಣವಿದ್ದಲ್ಲಿ ಮನುಷ್ಯ  ಆರೋಗ್ಯಕರವಾಗಿರಬೇಕಾದರೆ ಪರಿಸರ ಉತ್ತಮವಾಗಿರಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ವರ್ಷವೂ ಸಹ ಶಾಲಾ ಆವರಣದಲ್ಲಿ ಅರ್ಥಪೂರ್ಣವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಸಸಿಗಳನ್ನು ನೆಟ್ಟರೆ ಸಾಲದು ಪೋಷಣೆ ಅಗತ್ಯ ಈ ನಿಟ್ಟಿನಲ್ಲಿ ಕಳೆದ ವರ್ಷ ನೆಟ್ಟ ಗಿಡಗಳನ್ನು ಸಂರಕ್ಷಣೆ ಮಾಡುವಲ್ಲಿ  ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯವಾಗಿದೆ ಎಂದು ತಿಳಿಸಿದರು. ಶಾಲಾ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳಿಂದ ಹಲವಾರು ಜಾತಿಯ  ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.ಮುಖ್ಯ ಶಿಕ್ಷಕರಾದ ಶಿವಕುಮಾರ್ ಕೆಆರ್ ಹಾಗೂಎಲ್ಲಾ ವಸತಿ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು,