ಮೋದಿ ಪ್ರಮಾಣವಚನ: ಸಂಭ್ರಮಾಚರಣೆ
ಕಲಬುರಗಿ,ಜೂ 9: ಎನ್‍ಡಿಎ ಮೈತ್ರಿಕೂಟದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಮತ್ತು ಭಾರತ ದೇಶದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕದ ವತಿಯಿಂದ ಸಿಹಿ ಹಂಚಿ, ಪಟಾಕಿ ಹಚ್ಚುವ ಮೂಲಕ ಸಂಭ್ರಮಾಚರಣೆ ಆಚರಿಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಇಂದು ಬೆಳಿಗ್ಗೆ ಸಂಭ್ರಮಾಚರಣೆ ನಡೆಯಿತು.
ಹಿಂದೂ ಜಾಗೃತಿ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ ಅವರು ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಪಾಲ್ಗೊಂಡರು.