ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ವೀರೇಂದ್ರ ಹೆಗ್ಗಡೆ ಕೊಡುಗೆ ಅಪಾರ
ಕೋಲಾರ,ಜೂ.೯- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಈ ಕೆಲಸ ಕಾರ್ಯಗಳಿಗೆ ಸಹಕಾರ ನೀಡಲು ಜೊತೆಗೆ ಕ್ಷೇತ್ರದಿಂದ ಸಮಾಜಕ್ಕೆ ಹಲವಾರು ಅನುಕೂಲಗಳನ್ನು ಮಾಡಲು ಕಮಿಟಿ ಇದ್ದು, ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆಯನ್ನು ಸಭಾಂಗಣದಲ್ಲಿ ಆಯೋಜಿಸಿದ್ದು, ಈ ಸಭೆಯನ್ನು ವೇದಿಕೆಯಲ್ಲಿ ಆಸೀನರಾಗಿದ್ದ ಗಣ್ಯರು ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕದ ಪರಿವರ್ತನೆಯ ರುವಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೆ ಆದಂತಹ ಕೊಡುಗೆಯನ್ನು ಕೊಟ್ಟಂತಹ ಕ್ಷೇತ್ರ ಧರ್ಮಸ್ಥಳ. ಪೂಜ್ಯರು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದಲ್ಲಿ ಅನೇಕ ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಗಾಂಧೀಜಿಯವರು ಕಂಡಂತಹ ರಾಮರಾಜ್ಯದ ಕನಸನ್ನು ಪೂಜ್ಯರು ಪ್ರೀತಿಯ ಕಾರ್ಯಕ್ರಮವಾದ ಜನಜಾಗೃತಿ ವೇದಿಕೆಯ ಮೂಲಕ ಪೂಜ್ಯರು ನನಸು ಮಾಡುತ್ತಿದ್ದಾರೆ ಎಂದರು.
ಜನಜಾಗೃತಿ ವೇದಿಕೆಯ ಮುಖೇನ ಶಾಲಾ ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ದುಶ್ಚಟಮುಕ್ತ ಸಮಾಜ ನಿರ್ಮಾಣದ ಬಗ್ಗೆ ಅರಿವು ಮೂಡಿಸುವ ಮೂಲಕ ಜಾಗೃತರನ್ನಾಗಿಸುವ ಪರಿಣಾಮಕಾರಿ ಕಾರ್ಯಕ್ರಮವನ್ನು ಅನುಷ್ಠಾನ ಮಾಡಿರುವುದು ಸಮಾಜಕ್ಕೆ ಪೂಜ್ಯರು ನೀಡಿರುವ ದೊಡ್ಡ ಕೊಡುಗೆ ಆಗಿದೆ ಎಂದು ತಿಳಿಸಿದರು.
ಜನಜಾಗೃತಿ ವೇದಿಕೆಯಲ್ಲಿನ ಸದಸ್ಯರುಗಳು ಎಲ್ಲಾ ರಂಗಗಳಲ್ಲಿರು ವವರು ಇದ್ದಾರೆ. ಸಮಾಜಕ್ಕೆ ಸಾಮಾಜಿಕ ಮತ್ತು ಆರ್ಥಿಕ, ಧಾರ್ಮಿಕ, ಶೈಕ್ಷಣಿಕವಾಗಿ ಬಹು ದೊಡ್ಡ ಕೊಡುಗೆ ಕೊಟ್ಟಂತಹ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ. ಪೂಜ್ಯರು ಯೋಜನೆಯ ಮೂಲಕ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಸುಮಾರು ೫೮ ಲಕ್ಷ ಮಂದಿ ಸ್ವಸಹಾಯ ಸಂಘದ ಮೂಲಕ ಆರ್ಥಿಕ ಸಬಲೀಕರಣದಲ್ಲಿ ಮುಂಚೂಣಿಯಲ್ಲಿದ್ದು ಸ್ವಾಭಿಮಾನದಿಂದ ಬದುಕಲು ಸಾದ್ಯವಾಗಿದೆ ಎಂದು ತಿಳಿಸಿದರು,
ಪೂಜ್ಯ ಹೆಗ್ಗಡೆಯವರು ಸಮಾಜಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಪ್ರಮುಖವಾಗಿ ೧.ಧಾರ್ಮಿಕ ಕ್ಷೇತ್ರಗಳಿಗೆ ಅನುಧಾನ ೨. ಹೈನುಗಾರಿಕೆ ಅನುಧಾನ ೩.ಶೈಕ್ಷಣಿಕ ಕ್ಷೇತ್ರಕ್ಕೆ ಅನುಧಾನ ಹೀಗೆ ಸ್ವಸಹಾಯ ಸಂಘಗಳ ಆರ್ಥಿಕ ಯೋಜನೆ ಅಲ್ಲದೆ ಸಮಾಜಕ್ಕೆ ತನ್ನದೆ ಆದಂತಹ ಕೊಡುಗೆಗಳನ್ನು ಪೂಜ್ಯರು ನೀಡಿದ್ದಾರೆ ಎಂದು ಹೇಳಿದರು. ಸರ್ವಧರ್ಮಗಳ ಪವಿತ್ರ ತಾಣ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಕ್ರಾಂತಿಕಾರಿ ಯೋಜನೆಗಳ ಮೂಲಕ ರಾಜ್ಯದ ಮಹಿಳೆಯರ ಬಗ್ಗೆ ಸದಾ ಚಿಂತನೆಯನ್ನು ಮಾಡುವವರು ವಾತ್ಸಲ್ಯಮಯಿ ಮಾತೃಶ್ರೀ ಡಾ.ಹೇಮಾವತಿ ವಿ.ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವಿಶ್ವಕ್ಕೆ ಮಾದರಿಯಾಗಿ ಬಡತನ ನಿರ್ಮೂಲನೆಗಾಗಿ ಕ್ರಾಂತಿಕಾರಿ ಯೋಜನೆಗಳ ರುವಾರಿಗಳಾದ ಪೂಜ್ಯ ಹೆಗ್ಗಡೆಯವರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಸಮಾಜದ ಮುನ್ನೆಲೆಗೆ ತರುವ ವ್ಯವಸ್ತೆಯನ್ನು ಮಾಡಿದ್ದಾರೆಂದರು.
ನಿರ್ಗತಿಕ ವೃದ್ಧರನ್ನು ಗುರುತಿಸಿ ರಾಜ್ಯಾದ್ಯಂತ ಸುಮಾರು ೧೮೦೦೦ ಮಂದಿಗೆ ಮಾಸಿಕ ಖರ್ಚಿಗಾಗಿ ಮಾಶಾಸನವನ್ನು ನೀಡುತ್ತಿದ್ದು ಗುಡಿಸಲಿನಲ್ಲಿ ವಾಸ ಮಾಡುತ್ತಿರುವ ನಿರ್ಗತಿಕರನ್ನು ಗುರುತಿಸಿ ವಾತ್ಸಲ್ಯ ಯೋಜನೆಯಡಿ ಮನೆಯನ್ನು ರಚನೆ ಮಾಡಿ ದಿನನಿತ್ಯದ ಕುಟುಂಬ ನಿರ್ವಹಣೆಗೆ ಬೇಕಾದಂತಹ ಪರಿಕರಗಳನ್ನು ನೀಡುವ ಮೂಲಕ ಸರ್ಕಾರ ಮಾಡದ ಕೆಲಸವನ್ನು ಯೋಜನೆಯ ಮೂಲಕ ಪೂಜ್ಯರು ಮತ್ತು ಮಾತೃಶ್ರೀ ಅಮ್ಮನವರು ಮಾಡುತ್ತಿದ್ದಾರೆ ಎಂದು ತಿಳಿಸಿ ನಾವು ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಕರ್ತರು ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ತಿಳಿಸಿದರು.
ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣವನ್ನು ಪಡೆಯುತ್ತಿರುವ ಸಂಘದ ಸದಸ್ಯರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸುಜ್ಞಾನ ನಿಧಿ ಶಿಶ್ಯವೇತನದಿಂದ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ಪೂಜ್ಯರು ನೀಡಿದ್ದಾರೆ. ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಪೂಜ್ಯರ ಸೇವಾ ಮಾದರಿ ಕಾರ್ಯಗಳು ಜಾಗತಿಕ ಮಟ್ಟಕ್ಕೆ ತಲುಪುವ ಮೂಲಕ ಮಹಿಳಾ ಸಬಲೀಕರಣಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ತಿಮ್ಮಯ್ಯನಾಯ್ಕ ಕೋಲಾರ ಜಿಲ್ಲಾ ವ್ಯಾಪ್ತಿಯ ಯೋಜನಾ ಕಛೇರಿ ವ್ಯಾಪ್ತಿಯ ಕ್ರಿಯಾಯೋಜನೆಗಳ ಕುರಿತು ತಿಳಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿರುವುದು ಅಭಿನಂದನೀಯ ಎಂದ ಅವರು ಜಿಲ್ಲಾ ವೇದಿಕೆಯ ಪದಾಧಿಕಾರಿಗಳಿಂದ ಜಿಲ್ಲೆಯ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆರೋಗ್ಯಕರ ಚರ್ಚೆಯನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ವೆಂಕಟೇಶ್, ಕೋಲಾರ ಜಿಲ್ಲೆಯ ಜಿಲ್ಲಾ ನಿರ್ದೇಶಕ ಪದ್ಮಯ ಸಿಎಚ್, ಜಿಲ್ಲೆಯ ೮ ತಾಲೂಕಿನ ಯೋಜನಾಧಿಕಾರಿಗಳು, ಒis ಯೋಜನಾಧಿಕಾರಿ ಜಿಲ್ಲಾ ಮತ್ತು ತಾಲೂಕು ಯೋಜನ ಕಚೇರಿಯ ಸಿಬ್ಬಂದಿಗಳು, ಜನಜಾಗೃತಿ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.