ನಂದಿ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ವಿಜಯಪುರ,ಜೂ.8:ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಿ.ಟಿ. ಪಾಟೀಲ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಸಸಿ ನೆಡುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ಅಧ್ಯಕ್ಷ ಬಿ.ಡಿ. ಪಾಟೀಲ ಅವರು, ಪರಿಸರವನ್ನು ನಾವು ಕಾಪಾಡುವುದರಿಂದ ಪರಿಸರ ನಮ್ಮನ್ನು ಕಾಪಾಡುತ್ತದೆ. ಕಾರಣ ಎಲ್ಲರೂ ಪರಿಸರ ಉಳಿಸಿ ಬೆಳೆಸೋಣ ಎಂದು ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕೆ.ಸಿ. ದೇಸಾಯಿ, ಉಪಾಧ್ಯಕ್ಷ ಎ.ಪಿ. ಲೆಂಕೆನ್ನವರ, ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ಉಪಾಧ್ಯಕ್ಷ ಎಸ್.ಟಿ. ಪಾಟೀಲ ಮತ್ತು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ರಾಜಗೋಪಾಲ, ನಂದಿ ಕಾರ್ಖಾನೆಯ ಹಾಗೂ ಶಾಲೆಯ ನಿರ್ದೇಶಕರುಗಳಾದ ಎ.ವಿ. ದೇಸಾಯಿ, ಆಯ್.ಬಿ. ನ್ಯಾಮಗೌಡರ ಹಾಗೂ ಪ್ರಗತಿ ಪರ ರೈತ ಬಸವರಾಜ ಮರೇಗುದ್ದಿ ಮತ್ತು ಶಾಲೆಯ ಪ್ರಾಚಾರ್ಯರು, ಕಾರ್ಯದರ್ಶಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.