ಡಾ. ಚಂದ್ರಶೇಖರ್ ಪಾಟೀಲಗೆ ಭರ್ಜರಿ ಗೆಲವು ವಿಜಯೋತ್ಸವ
ಹುಮನಾಬಾದ್ : ಜೂ.8:ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ ಪಾಟೀಲ್ 2ನೇ ಬಾರಿಗೆ ಭಾರಿ ಬಹುಮತದಿಂದ ಗೆಲವು ಸಾಧಿಸಿರುವುದು ಸಂತಸ ತಂದಿದೆ ಎಂದು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಅಫ್ಸರಮಿಯ ಹೇಳಿದರು.
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲವು ಸಾಧಿಸಿದ ಹಿನ್ನಲೆ ಹುಮನಾಬಾದ್ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಹೂಗುಚ್ಚ ಸಲ್ಲಿಸಿ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿದ ಬಳಿಕ ಮಾತನಾಡಿದರು.
ಈ ಚುನಾವಣೆಯಲ್ಲಿ ಮತದಾರರ ಆಶೀರ್ವಾದದಿಂದ ಸತತ ಎರಡನೇ ಬಾರಿಗೆ ಡಾ. ಚಂದ್ರಶೇಖರ ಪಾಟೀಲ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಕ್ಷೇತ್ರದ ಮತದಾರರಿಗೆ ಹಾಗೂ ಕಾಂಗ್ರೆಸ್ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅನಂತ ಧನ್ಯವಾದಗಳು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದತ್ತಕುಮಾರ ಚಿದ್ರಿ, ಮಹೇಶ ಅಗಡಿ, ಸೈಯದ್ ಯಾಶೀನ್ ಅಲಿ, ಅಶೋಕಕುಮಾರ ಚಳಕಾಪೂರೆ, ಅಶೋಕ ಸೊಂಡೆ, ಪ್ರಕಾಶ ತಾಳಮಡಗಿ, ಧರ್ಮರಡ್ಡಿ, ಜಗನಾಥ ನವಲೆ ಇದ್ದರು.