ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಭಾಜಪಾ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಔರಾದ :ಸೆ.೨೫: ಹೈಕೋರ್ಟ್ ತೀರ್ಪನ್ನು ಗೌರವಿಸಿ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಔರಾದ ಮಂಡಲ ಕಾರ್ಯಕರ್ತರು ಪಟ್ಟಣದಲ್ಲಿ ಟೈರ್ ಗೆ ಬೆಂಕಿಯಿಟ್ಟು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ನ ತೀರ್ಪು ಸ್ವಾಗತಾರ್ಹವಾಗಿದೆ, ನಾನೊಬ್ಬ ಸಂವಿಧಾನ ತಜ್ಞ, ಕಾನೂನು ತಜ್ಞ ಎಂದು ಹೇಳಿಕೊಳ್ಳುವ ಲಾಯರ್ ಸಿದ್ದರಾಮಯ್ಯ ರವರಿಗೆ ಕಾನೂನಿನ ಮೇಲೆ, ಸಂವಿಧಾನದ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ, ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಶಿವರಾಜ ಅಲ್ಮಾಜೆ, ಮಂಡಲ ಪ್ರಧಾನ ಕಾರ್ಯದರ್ಶಿ ಖಂಡೋಬಾ ಕಂಗಟೆ, ಎಪಿಎಂಸಿ ಅಧ್ಯಕ್ಷ ಧೋಂಡಿಬಾ ನರೋಟೆ, ದಯಾನಂದ ಘೂಳೆ, ಬಸವರಾಜ ಹಳ್ಳೆ, ಮಾದೇವ, ಆನಂದ ಡ್ಯಾಡೆ, ಬಸಪ್ಪ ಸೋಮರೆ, ಕೇರಬಾ ಪವಾರ್, ಮಹೇಶ ಭಾಲ್ಕೆ, ಬಾಬುರಾವ ರಾಥೋಡ್, ಸುಜಿತ ರಾಥೋಡ್, ಅನಿಲ, ಜಗದೀಶ ಪಾಟೀಲ್, ಜಗನ್ನಾಥ ಚಿಟ್ಮೆ, ಸುನಿಲ ಸುಸಲಾದೆ ಸೇರಿದಂತೆ ಇನ್ನಿತರರಿದ್ದರು.