ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಸಂಜೆವಾಣಿ ವಾರ್ತೆ
ಹನೂರು ಜೂ 8 :- ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಪ್ರಾಧಿಕಾರ ಕಾರ್ಯದರ್ಶಿ ರಘು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರಾಧಿಕಾರ ಕಾರ್ಯದರ್ಶಿ ರಘು ರವರು ಮಾತನಾಡಿ ಈಗಾಗಲೆ ನಡೆಯುತ್ತಿರುವ ಧೀಪದ ಗಿರಿ ಒಡ್ಡು ಮಾದಪ್ಪನ 108 ಅಡಿ ಎತ್ತರದ ಮೂರ್ತಿಯ ಕೆಳಭಾಗದಲ್ಲಿ ನಿರ್ಮಾಣವಾಗುತ್ತಿರುವ ಮಾದಪ್ಪನ ಚರಿತ್ರೆಯನ್ನು ಸಾರುವ ಮ್ಯೂಸಿಯಂ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.
ಧೀಪದ ಗಿರಿ ಒಡ್ಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ, 512 ಅಥಿತಿ ವಸತಿ ಗೃಹ, ದೊಡ್ಡಕೆರೆ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ ಈ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಸಂಬಂಧ ಪಟ್ಟ ಅಧಿಕಾರಿಗಳು ಹಾಗು ಗುತ್ತಿಗೆದಾರರಿಗೆ ಸೂಚಿಸಿದರು.
ಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಮತ್ತು ಕ.ನ. ನೀ.ಸ. ಒ.ಚ ಮಂಡಳಿ ರವರುಗಳು, ಪ್ರಾಧಿಕಾರದ ಉಪ ಕಾರ್ಯದರ್ಶಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸೆಸ್ಕಾಂ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ಹಾಗು ಗುತ್ತಿಗೆದಾರರು ಹಾಜರಿದ್ದರು.