ಹಣ್ಣಿನ ಗಿಡ ನೆಟ್ಟು ಪರಿಸರ ದಿನ ಆಚರಣೆ
ಮಧುಗಿರಿ, ಜೂ. ೮- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಮಿಡಿಗೇಶಿ ಕುವೆಂಪು ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಎಂಬಿಎಚ್‌ಪಿಎಲ್ ಕಂಪನಿ ವತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಉದ್ಘಾಟಿಸಿದರು. ಪಿಡಿಓ ರಂಗನಾಥ್, ಕಂಪನಿಯ ದಿನೇಶ್, ದಿನೇಶ್‌ಕುಮಾರ್, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜು, ಶಾಲೆಯ ಮುಖ್ಯ ಶಿಕ್ಷಕಿಲಕ್ಷಅಮಿನರಸಮ್ಮ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.