ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ
ಮಧುಗಿರಿ, ಜೂ.೮- ತಾಲ್ಲೂಕಿನ ಮಿಡಿಗೇಶಿ ಕುವೆಂಪು ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಎಂಬಿಎಚ್‌ಪಿಎಲ್ ಕಂಪನಿ ವತಿಯಿಂದ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕೆಪಿಎಸ್ ಶಾಲಾ ಪ್ರಾಂಶುಪಾಲರಾದ ಲತಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಭಾಗವಹಿಸಿದ್ದರು. ಪಿಡಿಓ ರಂಗನಾಥ್, ಕಂಪನಿ ವತಿಯಿಂದ ದಿನೇಶ್, ದಿನೇಶ್‌ಕುಮಾರ್, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.