ನರೇಂದ್ರ ಕಾಲೇಜಿನಲ್ಲಿ ಪರಿಸರ ದಿನಾಚರಣೆ
ಬೀದರ್:ಜೂ.7: ಶ್ರೀ ಶಾಂತಿಕಿರಣ ಚಾರಿಟಬಲ್ ಆಯಿಂಡ್ ಎಜುಕೇಷನ್ ಟ್ರಸ್ಟ್ ಸಂಚಾಲಿತ ಇಲ್ಲಿಯ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಪರಿಸರ ಉತ್ತಮವಾಗಿದ್ದರೆ ಮಾತ್ರ ಮನುಷ್ಯನಿಗೆ ಉಳಿಗಾಲವಿದೆ. ಹೀಗಾಗಿ ಪರಿಸರ ಸಂರಕ್ಷಣೆ ಬಹಳ ಅವಶ್ಯಕವಾಗಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ನುಡಿದರು.
ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಟೀಲ, ನಿರ್ದೇಶಕಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಉಪಸ್ಥಿತರಿದ್ದರು.