ರಸ್ತೆ ಅಪಘಾತದಲ್ಲಿ ಭಟ್ಕಳದ ವ್ಯಕ್ತಿ ಮೃತ್ಯು

ಕುಂದಾಪುರ: ಭೀಕರ ರಸ್ತೆ ಅಪಘಾತದಲ್ಲಿ ಭಟ್ಕಳ ನಿವಾಸಿ ದಿವಂಗತ ಅಬೂಬಕರ್ ಸಿದ್ದೀಕ್ವಾ ಅವರ ಪುತ್ರ ಮೊಹಮ್ಮದ್ ನಾಸಿರ್ ಸಿದ್ದೀಕ್ವಾ (ಘಾಟಿ) ಎಂಬುವರು ಮೃತಪಟ್ಟಿದ್ದಾರೆ.ಮೃತರು ಭಟ್ಕಳದ ಮೂಸ ನಗರದ ನಿವಾಸಿ.
ಸೋಮವಾರ ರಾತ್ರಿ ೮:೪೫ ರ ಸುಮಾರಿಗೆ ಕುಂದಾಪುರದಿಂದ ಸರಿಸುಮಾರು ೯ ಕಿಮೀ ದೂರದಲ್ಲಿರುವ ಓಊ ೬೬ ರ ಅರಾಟೆ ಸೇತುವೆ ಬಳಿ ಅಪಘಾತ ಸಂಭವಿಸಿದೆ. ಕುಟುಂಬ ಸದಸ್ಯರೊಂದಿಗೆ ಮಂಗಳೂರಿನಿಂದ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ವಾಹನದಿಂದ ಅಸ್ವಾಭಾವಿಕ ಶಬ್ಧ ಕೇಳಿ ಬಂದ ನಂತರ ನಾಸಿರ್ ಕಾರನ್ನು ನಿಲ್ಲಿಸಿದ್ದರು ಎನ್ನಲಾಗಿದೆ. ರಸ್ತೆ ಬದಿ ವಾಹನ ನಿಲ್ಲಿಸಿ ಸಮಸ್ಯೆ ಪರಿಶೀಲಿಸಲು ಮುಂದಾದರು. ಅವರು ಮತ್ತೆ ಕಾರನ್ನು ಪ್ರವೇಶಿಸಲು ಮುಂದಾದಾಗ, ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದ್ದು, ನಾಸಿರ್‌ಗೆ ತೀವ್ರ ಗಾಯಗಳಾಗಿವೆ.
ಗಂಗೊಳ್ಳಿಯಿಂದ ೨೪೭ ಒಊI ಆಂಬ್ಯುಲೆನ್ಸ್ ಘಟನಾ ಸ್ಥಳಕ್ಕೆ ಆಗಮಿಸಿ ನಾಸಿರ್ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಲಾಯಿತು.