ಕೆಎಸ್‌ಆರ್‍ಟಿಸಿ : ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಮಂಗಳೂರು-ಕೆಎಸ್‌ಆರ್‍ಟಿಸಿ ಮಂಗಳೂರು ವಿಭಾಗದ ವತಿಯಿಂದ  ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ ೩ರಿಂದ ೧೨ರ ವರೆಗೆ ಆಯೋಜಿಸಲಾಗಿದೆ.
ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ
ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ :
ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ ೮ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ – ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – (ಮಧ್ಯಾಹ್ನದ ಊಟ) – ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್ – ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ) – ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ ರಾತ್ರಿ ೮ಗಂಟೆಗೆ ಮಂಗಳೂರು ಬಸ್ಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ.  – ಒಟ್ಟು ಪ್ರಯಾಣದರ (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.೪೦೦/- ಮಕ್ಕಳಿಗೆ (೬ ವರ್ಷದಿಂದ ೧೨ ವರ್ಷದವರಿಗೆ) ರೂ.೩೦೦/- ಪ್ರಯಾಣ ದರ ನಿಗದಿಪಡಿಸಲಾಗಿದೆ.
ಮಡಿಕೇರಿ ಪ್ಯಾಕೇಜ್ ಪ್ರವಾಸ :
ಮಂಗಳೂರಿನಿಂದ ಬೆಳಿಗ್ಗೆ ೭ಗಂಟೆಗೆ ಹೊರಟು -ಮಡಿಕೇರಿ-ರಾಜಾಸೀಟ್-ಅಬ್ಬಿಫಾಲ್ಸ್-ನಿಸರ್ಗಧಾಮ- ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ ೯ಗಂಟೆಗೆ ಮಂಗಳೂರು ಬಸ್ಸ್‌ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ.  (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.೫೦೦/- ಮಕ್ಕಳಿಗೆ (೬ವರ್ಷದಿಂದ ೧೨ ವರ್ಷದವರಿಗೆ) ರೂ.೪೦೦/- ನಿಗದಿಪಡಿಸಲಾಗಿದೆ.
ಮಂಗಳೂರು-ಕೊಲ್ಲೂರು ಪ್ಯಾಕೇಜ್ ಪ್ರವಾಸ :
ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ ೮ ಗಂಟೆಗೆ ಹೊರಟು – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ – ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ – ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ  ೭ಗಂಟೆಗೆ  ಮಂಗಳೂರು ಬಸ್ಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.೫೦೦/- ಮಕ್ಕಳಿಗೆ (೬ವರ್ಷದಿಂದ ೧೨ ವರ್ಷದವರಿಗೆ) ರೂ.೪೦೦/- ದರ ನಿಗದಿಪಡಿಸಲಾಗಿದೆ.
ಮಂಗಳೂರು-ಮುರುಡೇಶ್ವರ ಟೂರ್ ಪ್ಯಾಕೇಜ್
ಮಂಗಳೂರು ಬಸ್‌ನಿಲ್ದಾಣ ದಿಂದ ಬೆಳಿಗ್ಗೆ ೭ಗಂಟೆಗೆ ಹೊರಟು  ? ಮುರುಡೇಶ್ವರ ದೇವಸ್ಥಾನ – ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ – ಆನೆಗುಡ್ಡೆ ಗಣಪತಿ ದೇವಸ್ಥಾನ ಕುಂಭಾಶಿ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ  ಪ್ರವಾಸ ಕೈಗೊಂಡು ರಾತ್ರಿ ೭ಗಂಟೆಗೆ ಮಂಗಳೂರು ಬಸ್ಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ.   (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.೫೫೦/- ಮಕ್ಕಳಿಗೆ (೬ ವರ್ಷದಿಂದ ೧೨ ವರ್ಷದವರಿಗೆ) ರೂ.೪೫೦/- ದರ ನಿಗದಿಪಡಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸದರಿ ಸಾರಿಗಳಿಗೆ ತಿತಿತಿ.ಞsಡಿಣಛಿ.iಟಿ ನಲ್ಲಿ ಮುಂಗಡ ಆಸನ ಕಾಯ್ದಿರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ೭೭೬೦೯೯೦೭೦೨, ೭೭೬೦೯೯೦೭೧೧,                  ಮಂಗಳೂರು-೧ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ ; ೭೭೬೦೯೯೦೭೧೩, ಮಂಗಳೂರು-೩ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ – ೭೭೬೦೯೯೦೭೨೩, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್, ದೂರವಾಣಿ ಸಂಖ್ಯೆ ೯೬೬೩೨೧೧೫೫೩, ಮಂಗಳೂರು ಬಸ್ ನಿಲ್ದಾಣ, ದೂರವಾಣಿ ಸಂಖ್ಯೆ : ೭೭೬೦೯೯೦೭೨೦ ಸಂಪರ್ಕಿಸುವಂತೆ ಕೆಎಸ್‌ಆರ್‍ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.