ಸಮನ್ವಯದಿಂದ ಕೆಲಸ ಮಾಡಬೇಕು
ಧಾರವಾಡ,ಜೂ7: ಕಾರ್ಮಿಕ ಇಲಾಖೆ ಅಧಿಕಾರಿಗಳು ಇನ್ನೂ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಬಾಲ ಕಾರ್ಮಿಕರು ಪತ್ತೆಯಾದ ಪ್ರಕರಣಗಳಲ್ಲಿ ದುಡಿಸಿಕೊಳ್ಳುವ ಮಾಲೀಕನೊಂದಿಗೆ ಪತ್ತೆಯಾದ ಮಕ್ಕಳ ಪಾಲಕರ ವಿರುದ್ಧವು ಪ್ರಕರಣ ದಾಖಲಿಸಿ, ಅವರ ವಿರುದ್ಧ ಸಹ ಕ್ರಮಕೈಗೊಳ್ಳಬೇಕು. ಮಾಲೀಕ ಮತ್ತು ಪಾಲಕ ಇಬ್ಬರನ್ನು ಜವಾಬ್ದಾರಗೊಳಿಸಿದಾಗ ಇದರ ಗಂಭೀರತೆ ಅರ್ಥವಾಗಿ, ಬಾಲಕಾರ್ಮಿಕ ಪದ್ಧತಿ ನಿಯಂತ್ರಣವಾಗುತ್ತದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಮತ್ತು ಟಾಸ್ಕಪೋರ್ಸ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಜಿಲ್ಲಾ ಬಾಲಕಾರ್ಮಿಕ ಸಂಘದ ಯೋಜನಾ ಅಧಿಕಾರಿ ಬಸವರಾಜ ಪಂಚಾಕ್ಷರಿಮಠ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.