ದಾಮೋದರ ರಘೋಜಿ ಸ್ಮಾರಕ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ
ಕಲಬುರಗಿ: ಜೂ.6:ನಗರದ ಶ್ರೀ ದಾಮೋದರ ರಘೋಜಿ ಸ್ಮಾರಕ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೋಳ್ಳಲಾಯಿತು.
ಪಾಲಕರು ತಮ್ಮ ಮಕ್ಕಳಿಗೆ ವಿವಿಧ ರೀತಿಯ ಸಸಿಗಳನ್ನು ಕೊಡುವುದರೊಂದಿಗೆ ವಿಶ್ವಪರಿಸರ ದಿನಾಚರಣೆಗೆ ಕೈಜೋಡಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷರಾದ ರಾಮಚಂದ್ರ ಡಿ ರಘೋಜಿ, ಕಾರ್ಯದರ್ಶಿಗಳಾದ ಮೀರಾ ಆರ್ ರಘೋಜಿ, ಪ್ರಾಂಶುಪಾಲರಾದ ಪ್ರಮೋದ ಎಸ್ ಮಳೇಕರ ಅವರು ಹಸಿರೇ ನಮ್ಮ ಉಸಿರು, ಕಾಡು ಬೆಳೆಸಿ ನಾಡು ಉಳಿಸೋಣ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂಬ ಧ್ಯೇಯ ವಾಕ್ಯಗಳೊಂದಿಗೆ ಬಿಸಿಲ ನಾಡನ್ನು ಹಸಿರೀಕರಣ ಗೋಳಿಸಲು ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು. ಕಾರ್ಯಕ್ರಮದಲ್ಲಿ ಬೋಧಕರು, ಬೋಧಕೇತರರು ಹಾಗೂ ಮಕ್ಕಳು ಉಪಸ್ಥಿತರಿದ್ದರು.