ಉಚ್ಚ ನ್ಯಾಯಾಲಯ ಕಲಬುರಗಿ ಪೀಠದ ಆವರಣದಲ್ಲಿಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ
ಕಲಬುರಗಿ,ಜೂ.06:ಕಲಬುರಗಿ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಲಬುರಗಿ ಪೀಠ, ಗುಲಬರ್ಗಾ ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಕಲಬುರಗಿ ಪೀಠದ ಆವರಣದಲ್ಲಿ ಬುಧವಾರ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಕಲಬುರಗಿ ಪೀಠದ ಹಿರಿಯ ನ್ಯಾಯಮೂರ್ತಿಗಳಾದ ಅಶೋಕ್ ಎಸ್.ಕಿಣಗಿ ಹಾಗೂ ನ್ಯಾಯಮೂರ್ತಿಗಳಾದ ಆರ್.ನಟರಾಜ್, ಎಸ್.ವಿಶ್ವಜಿತ್ ಶೆಟ್ಟಿ, ಕೆ.ಎಸ್.ಹೇಮಲೇಖಾ, ಉಮೇಶ ಎಂ.ಅಡಿಗ, ರಾಜೇಶ್ ರೈ.ಕೆ. ಹಾಗೂ ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಇತರೆ ಪದಾಧಿಕಾರಿಗಳು ಕಲಬುರಗಿ ಪೀಠದ ಆವರಣದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.