ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟನೆ
ಕಲಬುರಗಿ:ಸೆ.24:2024-25 ನೇ ಸಾಲಿನಲ್ಲಿ ಶಿಶು ಅಭಿವೃದ್ಧಿ ಯೋಜನೆ, ಕಲಬುರಗಿ (ನಗರ) ಯೋಜನೆಯ ವತಿಯಿಂದ ಕಲಬುರಗಿಯ ಶಿವಾಜಿ ನಗರ (ಬಿ) ವಲಯದ ಫಿಲ್ಟರ್ ಬೆಡ್ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ-2024ರ ಕಾರ್ಯಕ್ರಮವನ್ನು ಕಲಬುರಗಿ ಮಹಾನಗರ ಪಾಲಿಕೆ ಸದಸ್ಯೆ ಅರುಣಾದೇವಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪೆÇೀಷಣ ಅಭಿಯಾನ ಯೋಜನೆ ಕುರಿತು ಮಾತನಾಡಿದ ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮರಾಯ ಕಣ್ಣೂರ ಅವರು, 0-6 ವರ್ಷದ ಮಕ್ಕಳು, ಕಿಶೋರಿಯರು, ಗರ್ಭಿಣಿಯರು ಹಾಗೂ ಬಾಣಂತಿಯರ ಪೌಷ್ಠಿಕ ಮಟ್ಟವನ್ನು ಸುಧಾರಣೆ ಮಾಡುವುದು, ಕಡಿಮೆ ತೂಕದ ಮಕ್ಕಳ ಜನನ ಪ್ರಮಾಣವನ್ನು ನಿಯಂತ್ರಿಸುವುದು, ಬಾಣಂತಿ ಹಾಗೂ ಮಕ್ಕಳಲ್ಲಿ ರಕ್ತ ಹೀನತೆಯನ್ನು ತಡೆಗಟ್ಟುವುದು ಈ ಪೆÇೀಷಣ ಅಭಿಯಾನದ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬಡಾವಣೆ ಮುಖಂಡರಾದ ಚೆನ್ನವೀರ ಲಿಂಗನವಾಡಿ ಅವರು ಮಾತನಾಡಿದರು.
ಕಲಬುರಗಿ ನಗರ ಯೋಜನೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಪೆÇೀಷಣ ಮಾಸಾಚರಣೆಯನ್ನು ಆಚರಿಸಲಾಗುತ್ತದೆ. ಈ ವೇಳೇ ಸುತ್ತಮುತ್ತಲಿನ ಸಾರ್ವಜನಿಕರು, ಮಹಿಳೆಯರು ಹಾಗೂ ಸಣ್ಣ ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆದು ಅಪೌಷ್ಠಿಕ ನಿವಾರಣೆ ಸಂಬಂಧ ಜಾಗೃತಿ ಮೂಡಿಸಲಾಗುತ್ತದೆ.
ಪ್ರಾಥಮಿಕ ರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|| ಸಂಧ್ಯಾರಾಣಿ ಪುರಾಣಿಕ, ಯೋಜನೆಯ ಹಿರಿಯ ಮೇಲ್ವಿಚಾರಕಿ ಗೀತಾ ಚೌವ್ಹಾಣ್, ಶಿವಾಜಿ ನಗರ (ಬಿ) ವಲಯದ ವಲಯ ಮೇಲ್ವಿಚಾರಕಿ ಜ್ಯೋತಿ ಹಾಗೂ ಯೋಜನೆಯ ವಲಯ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಫಲಾನುಭವಿಗಳಾದ ಮಕ್ಕಳು ಮತ್ತು ತಾಯಂದಿರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.