ಹೊಸಪೇಟೆ ತಾಲೂಕು ಆರೋಗ್ಯಇಲಾಖೆಯಿಂದ ವಿಶ್ವ ಪರಿಸರ ದಿನ
ಹೊಸಪೇಟೆ (ವಿಜಯನಗರ ಜಿಲ್ಲೆ) ಜೂ.06: ಹೊಸಪೇಟೆಯ ತಾಲೂಕು ಆರೋಗ್ಯ ಇಲಾಖೆಯಿಂದ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು.
‘ಭೂಮಿ ಮರುಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿ ಸ್ಥಾಪಕತ್ವ ಧ್ಯೇಯವಾಕ್ಯದಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಆವರಣದಲ್ಲಿ ಸಸಿ ನೆಟ್ಟರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಂಕರ್ ನಾಯ್ಕ್, ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ.ಸಲೀಂ, ವೈದ್ಯಾಧಿಕಾರಿಗಳಾದ ಡಾ.ಕಮಲಮ್ಮ ಸೇರಿದಂತೆ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು, ಹೊಸಪೇಟೆಯ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ಇದ್ದರು.