ಪ್ರವಾಸೋದ್ಯಮ ಇಲಾಖೆಯಿಂದ ಪರಿಸರ ದಿನಾಚರಣೆ
ಸಂಜೆವಾಣಿ ವಾರ್ತೆ
ಹೊಸಪೇಟೆ (ವಿಜಯನಗರ) ಜೂನ್ 06: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯ ಸ್ವಚ್ಛತಾ ಗ್ರೀನ್ ಲೀಫ್ ಅಡಿಯಲ್ಲಿ ಹಂಪಿಯ ಕಮಲಾಪುರದ ಹೋಟೆಲ್ ಮಯೂರ ಭುವನೇಶ್ವರಿ ಆವರಣದಲ್ಲಿ ಜೂನ್ 5ರಂದು ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಿಇಓ ಅವರು, ಅಮೋಘವಾದ ಪರಿಸರ ಹೊಂದಿದ ಕಾರಣಕ್ಕೆ ಹಂಪಿಯು ಪ್ರತಿಯೊಬ್ಬರನ್ನು ತನ್ನತ್ತ ಸೆಳೆಯುತ್ತಲೇ ಇದೆ. ಮನುಷ್ಯ ಸೇರಿದಂತೆ ಪ್ರತಿಯೊಂದು ಪ್ರಾಣಿ ಪಕ್ಷಿಗಳ ಸಂರಕ್ಷಣೆಯ ಹಿನ್ನೆಲೆಯಲ್ಲಿ ಈ ಭೂಮಿಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಕೆಎಸ್‌ಟಿಡಿಸಿ ಯ ವ್ಯವಸ್ಥಾಪಕ ಸುನಿಲ್‌ಕುಮಾರ್ ಎಸ್., ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಸಾಗರ್ ಬಿ.ಡಿ., ಪ್ರವಾಸೋದ್ಯಮ ಇಲಾಖೆಯ ಶ್ರೀಹರಿ, ಪ್ರವಾಸಿ ಮಾರ್ಗದರ್ಶಿಗಳು ಹಾಗೂ ಹೋಟೆಲ್ ಮಯೂರ ಭುವನೇಶ್ವರಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
One attachment • Scanned