ಪರಿಸರ ಸಂರಕ್ಷಿಸಣೆ ಪ್ರತಿಯೊಬ್ಬನ ಆದ್ಯ ಕರ್ತವ್ಯವಾಗಿದೆ
ಆನೇಕಲ್.ಜೂ.೬:ಪರಿಸರವನ್ನು ಸಂರಕ್ಷಿಸುವ ಕಾರ್ಯ ಪ್ರತಿಯೊಬ್ಬ ಮನುಷ್ಯನ ಆದ್ಯ ಕರ್ತವ್ಯವಾಗಿದೆ ಎಂದು ಬಿಜೆಪಿ ಮುಖಂಡ ಕೊಡತಿ ಅಶೋಕ್ ರೆಡ್ಡಿ ತಿಳಿಸಿದರು.
ಅವರು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೊಡತಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಗಿಡ ನೆಡುವ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದರು.
ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಯನ್ನು ನಾಶಮಾಡುವತ್ತ ನಮ್ಮ ಆಧುನೀಕರಣದ ತೇರು ಹೊರಟಿದೆ. ಇದರಿಂದ ಪ್ರಾಕೃತಿಕ ಸಂಪನ್ಮೂಲ ನಾಶವಾಗುವುದು ಮಾತ್ರವಲ್ಲದೆ ಸಕಲ ಚರಾಚರ ಜೀವರಾಶಿಗಳ ಪ್ರಾಣಕ್ಕೂ ತೊಂದರೆ ಉಂಟಾಗುತ್ತದೆ. ಅರಣ್ಯ ನಾಶದಿಂದಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಿದೆ ಎಂದರು.
ಕಾಡು ಬೆಳೆಸಿ, ನಾಡು ಉಳಿಸಿ, ಪರಿಸರ ಸಂರಕ್ಷಣೆ,ಅರಣ್ಯ ಸಂಪತ್ತು ಉಳಿಸಿ, ಎಂಬುದು ಕೇವಲ ಘೋಷಣೆಗೆ ಸೀಮಿತವಾಗಬಾರದು ಪ್ರತಿಯೊಬ್ಬರು ತಪ್ಪದೆ ತಮ್ಮ ಮನೆ ಮುಂದೆ ಒಂದೊಂದು ಗಿಡವನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು. ಇನ್ನು ಅವಧೂತ ಶ್ರೀ ವಿನಯ್ ಗುರೂಜಿಗಳು ಮತ್ತು ಮಹದೇವಪುರ ವಿಧಾನ ಸಭಾ ಕ್ಷೇತ್ರದ ಶಾಸಕಿ ಮಂಜುಳ ಅರವಿಂದ ಲಿಂಬಾವಳಿರವರ ಮಾರ್ಗದರ್ಶನದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕೊಡತಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಾಬುರೆಡ್ಡಿ. ಮಹದೇವಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಪ್ರದಾನ ಕಾರ್ಯದರ್ಶಿ ನಾಗೇಶ್ ರೆಡ್ಡಿ, ಕೊಡತಿ ಗ್ರಾಮ ಪಂಚಾಯಿತಿ ಸದಸ್ಯರಾದ ರಘು. ನವೀನ್, ಸೋಮಶೇಖರ್ ರೆಡ್ಡಿ. ಮುಖಂಡರಾದ ಲೋಕೇಶ್ ರೆಡ್ಡಿ.ಲಷ್ಮಣ್, ಮುರಳಿ ಮತ್ತು ಗ್ರಾಮಸ್ಥರು ಬಾಗವಹಿಸಿದ್ದರು.