ಪ್ರತಿವರ್ಷ ಪ್ರತಿಯೊಬ್ಬರು ಒಂದು ಸಸಿಯನ್ನು ನೆಡಿ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ. ಜೂ.6: ಪರಿಸರ ರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿರುವುದರಿಂದ ಪ್ರತಿಯೊಬ್ಬರು ಪ್ರತಿ ವರ್ಷ ಒಂದು ಸಸಿಯನ್ನು ನೆಡುವಂತೆ ಕಿವಿ ಮಾತು ಹೇಳಿದರು.
ಅವರು ಬುಧವಾರದಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮಕ್ಕೆ ಸಸಿಗೆ ನೀರರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ವಿಶ್ವ ಪರಿಸರ ದಿನಾಚರಣೆಯ ನಮ್ಮ ಸುತ್ತಮುತ್ತಲಿನ ಪರಿಸರವ ಸಂರಕ್ಷಿಸಲು ಜಾಗೃತಿ ಮೂಡಿಸುವ ಮತ್ತು ಪೆÇ್ರೀತ್ಸಾಹಿಸುವ ಕ್ರಿಯೆಯ ಗುರಿಯನ್ನು ಹೊಂದಿರುವ ಜಾಗತಿಕ ಕಾರ್ಯಕ್ರಮಕವಾಗಿದೆ. ಇದು ಪ್ರತಿ ವರ್ಷ ಜೂನ್ 5 ರಂದು ನಡೆಯುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೀದರ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ, ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.