ಪರಿಸರ ಸಂರಕ್ಷಣೆಗೆ ಹೆಚ್ಚಿನ ಅಧ್ಯತೆ ನೀಡಬೇಕು: ಹೆಚ್.ಜೆ.ಕೃಷ್ಣ
ಸಂಜೆವಾಣಿ ವಾರ್ತೆ
ಚಾಮರಾಜನಗರ.ಜೂನ್.06:- ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ಹೊಂದಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಆಧ್ಯತೆ ನೀಡಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಧೀಶರಾದ ಹೆಚ್.ಜೆ.ಕೃಷ್ಣರವರು ಎಂದು ತಿಳಿಸಿದರು.
ನಗರದ ಕರಿನಂಜನಪುರ ಸಮೀಪದ ಮಾದರಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ಮುಂಭಾಗ ರಸ್ತೆಗೆ ಈಶ್ವರಿ ಸೋಶಿಯಲ್ ಟ್ರಸ್ಟ್ ವತಿಯಿಂದ ಸಾಲು ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜಾಗತಿಕ ತಾಪಮಾನ ತುಂಬ ಹೆಚ್ಚಾಗಿದ್ದು ಉಷ್ಣಾಂಶವನ್ನು ಕಡಿಮೆ ಮಾಡಬೇಕಾದರೆ ಹೆಚ್ಚು ಗಿಡ,ಮರಗಳನ್ನು ಸಂರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಮಾತನಾಡಿ ಕೆರೆ, ಕಟ್ಟೆ, ಕಾಡು ಸಂರಕ್ಷಣೆ ಮಾಡಿದರೆ ಮಳೆಗಾಲದಲ್ಲಿ ನೀರು ಶೇಕರಣೆಯಾಗಿ ಪ್ರಾಣಿ,ಪಕ್ಷಿಗಳಿಗೆ, ಜಲಚರಗಳಿಗೆ ಹಾಗೂ ಮಾನವನಿಗೆ ಕುಡಿಯಲು ನೀರನ್ನು ಪಡೆಯಬಹುದು ಹಾಗೂ ಉತ್ತಮ ಪ್ರಕೃತಿ ಸೌಂಧರ್ಯವನ್ನು ಕಾಣಬಹುದು ಎಂದು ಅಭಿಪ್ರಾಯಪಟ್ಟರು. ಗಿಡ,ಮರಗಳನ್ನು ಬೆಳೆಸಿ ಅದರಿಂದ ನಾವುಗಳು ಶುದ್ದಗಾಳಿಯನ್ನು ಪಡೆಯಬಹುದಾಗಿದೆ ಎಂದರು.
ಈಶ್ವರಿ ಸೋಶಿಯಲ್ ಟ್ರಸ್ಟ್ ಸಂಸ್ಥಾಪಕ ಹಾಗೂ ಪರಿಸರ ಪ್ರೇಮಿ ಸಿ.ಎಂ.ವೆಂಕಟೇಶ್ ಮಾತನಾಡಿ ಚಾಮರಾಜನಗರ ಜಿಲ್ಲೆಯ ಸುತ್ತಮುತ್ತ 12000 ಕ್ಕೂ ಹೆಚ್ಚು ಗಿಡಗಳನ್ನು ನಮ್ಮ ಟ್ರಸ್ಟ್ ವತಿಯಿಂದ ನೆಟ್ಟು ಪೋಷಣೆ ಮಾಡಲಾಗುತ್ತಿದೆ, ಪರಸರ ಸಂರಕ್ಷಣೆ ಕಾರ್ಯವು ನಿತ್ಯ ನಿರಂತರವಾಗಿ ಕಳೆದ 8 ವರ್ಷಗಳಿಂದ ಸಾಗಿದೆ ಎಂದು ತಿಳಿಸಿದರು,
ಈ ಸಂದರ್ಭದಲ್ಲಿ ಚಾಮರಾಜನಗರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ವಿಸ್ತಾಣಾಧಿಕಾರಿ ಲಿಂಗರಾಜು, ವಿದ್ಯಾರ್ಥಿ ನಿಲಯದ ಮೇಲು ವಿಚಾರಕಿ ಶಿಲ್ಪ ಹಾಗೂ ಶಾಲಿನಿ ಸೇರಿದಂತೆ ವಿದ್ಯಾರ್ಥಿನಿಯರು ಹಾಜರಿದ್ದರು.