ಐ.ಬಿ.ವೃತ್ತದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ವಿಜಯೋತ್ಸವ

ಸಂಜೆವಾಣಿವಾರ್ತೆ
ಹರಪನಹಳ್ಳಿ.ಜೂ.೫: ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿದರು.ಪಟ್ಟಣದ ಐಬಿ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಡಾ.ಪ್ರಭಾ ಮಲ್ಲಿಕಾರ್ಜುನ್ ಪರ ಘೋಷಣೆ ಕೂಗುತ್ತ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತೂರು ಬಸವರಾಜ, ಮುಖಂಡರಾದ ಇಸ್ಮಾಯಿಲ್ ಎಲಿಗಾರ್, ಸಾಸ್ವಿಹಳ್ಳಿ ನಾಗರಾಜ, ಪ್ರಸಾದ ಕಾವಡಿ, ಚೌಡಪ್ಪ, ಮಲ್ಲಿಕಾರ್ಜುನ್, ಹಾಲೇಶ ಸೇರಿದಂತೆ ಇತರರು ಇದ್ದರು.
