ಭವಿಷ್ಯಕ್ಕಾಗಿ ಪರಿಸರ ಸಮತೋಲನ ಅವಶ್ಯ: ವಾಲಿಕಾರ
ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.6: ಮಗುವಿಗೊಂದು ಮರ, ಶಾಲೆಗೊಂದು ವನ ಮಾಡುವದರೊಂದಿಗೆ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಫಲ ನೀಡುವ ಮರಗಳನ್ನು ಬೆಳೆಸುವ ಕರ್ತವ್ಯ ನಮ್ಮೆಲ್ಲರದಾಗಿದೆ. ಅರಣ್ಯ ನಾಶದಿಂದ ಜೀವ ವೈವಿಧ್ಯದ ನಷ್ಟ ಉಂಟಾಗುತ್ತಿರುವ ಕಳವಳಕಾರಿ ವಿಷಯ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಬುಧವಾರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಶಿವಗಿರಿ ಕೇಂದ್ರದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದ ಪೀಳಿಗೆಗೆ ಪರಿಸರ ಸಮತೋಲನ ಕಾಪಾಡುವ ಜವಾಬ್ದಾರಿ ನಮ್ಮದಾಗಿದೆ. ವಾಯು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು.
ಸಮಾಜ ಸೇವಕ ರಾಜು ಜಾಧವ ಮುಖ್ಯ ಅತಿಥಿಗಳಾಗಿ ಮಾತನಾಡಿ, ಪರಿಸರ ನಾಶದಿಂದ ಪಶು, ಪಕ್ಷಿ, ಪ್ರಾಣಿಗಳ ವಿನಾಶಕ್ಕೆ ಕಾರಣವಾಗುತ್ತಿದೆ. ಪರಿಸರ ಸಂರಕ್ಷಣೆಯ ಮಾಡದೆ ಇದ್ದರೆ ಜಾಗತಿಕ ತಾಪಮಾನ ಏರಿಕೆಯಾಗಿ ಮನು ಕುಲಕ್ಕೆ ಧಕ್ಕೆ ಉಂಟಾಗುತ್ತದೆ ಎಂದರು.
ಡಾ. ಸುಮಾ ಮಮದಾಪೂರ ಉಪನ್ಯಾಸ ನೀಡಿ ಮಾತನಾಡಿ, ಮನೆಗೊಂದು ಮರ, ದೇಶಕ್ಕೆ ವರ, ರಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯು ಶಕ್ತಿ ಕಳೆದುಕೊಳ್ಳುತ್ತಿದೆ. ಕಾಡಿನ ಪ್ರಮಾಣ ಹೆಚ್ಚಿಸಿದರೆ ಮಳೆ ಪ್ರಮಾಣವು ಹೆಚ್ಚಾಗುತ್ತದೆ. ಎಂದರು.
ಬ್ರಹ್ಮಕುಮಾರಿ ಕೇಂದ್ರದ ಸಂಗೀತ ಅಕ್ಕನವರು, ಎಸ್.ಐ. ಬಗಲಿ ಆವರು ಮಾತನಾಡಿದರು. ಪ್ರಾಸ್ತಾವಿಕ ಬಿ.ಕೆ. ಸರೋಜಾ ಅಕ್ಕನವರು ಮಾತನಾಡಿದರು. ಬಿ.ಕೆ. ಕಲ್ಮೇಶ ನಿರೂಪಸಿದರು. ನಿಂಗಪ್ಪ ಬೈಚಬಾಳ ವಂದಿಸಿದರು. ಅಪ್ಪಾಸಾಹೇಬ ಜಂಗಮಶೆಟ್ಟಿ. ಮೊತಿಮಠ ವಕೀಲರು. ಚನ್ನಪ್ಪ ಕೊಪ್ಪದ. ಗಂಗಾಧರ, ಸಾವಿತ್ರಿ, ಶಾಂತಾ,É ಶೈಲಾ, ಶೋಭಾ, ಕವಿತಾ. ಉಪಸ್ಥಿತರಿದ್ದರು.