371 ಜೆ ಉಳಿಸದಿದ್ದರೆ, ಪ್ರತ್ಯೇಕ ರಾಜ್ಯಕ್ಕೆ ಆಗ್ರಹ
ಕಲಬುರಗಿ,ಜೂ 5:ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ವಿಧಿಯಡಿ ವಿಶೇಷ ಸ್ಥಾನಮಾನ ದೊರಕಿದ್ದರಿಂದ ರಾಜ್ಯದ 24 ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ವದಂತಿ ಹಬ್ಬಿಸುತ್ತಿರುವ ಸಂಘಟನೆಯಾದ, ಬೆಂಗಳೂರಿನ ಹಸಿರು ಪ್ರತಿಷ್ಠಾನ ನಮ್ಮ ಹಕ್ಕಿನ ತಂಟೆಗೆ ಬಂದರೆ ಪ್ರತ್ಯೇಕ ರಾಜ್ಯದ ಬೇಡಿಕೆ ಮಂಡಿಸಬೇಕಾಗುತ್ತದೆ ಎಂದು ನಗರದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವ ದಲ್ಲಿ ಜೂ 1 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಎಚ್ಚರಿಕೆ ನೀಡಲಾಯಿತು. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗ್ರತಿ ಹೋರಾಟ ಸಮಿತಿಯ, ಪ್ರಧಾನ ಕಾರ್ಯದರ್ಶಿ ಜೇನವೆರಿ ವಿನೋದ ಕುಮಾರ, ಮಾತನಾಡಿ, ಬೆಂಗಳೂರಿನ ಹಸಿರು ಪ್ರತಿಷ್ಠಾನ ದವರು 371(ಜೆ) ವಿರುದ್ಧ 24 ಜಿಲ್ಲೆ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಸಂವಿಧಾನ ಬದ್ಧ ಹಕ್ಕಿನ ಮೂಲ ಉದ್ದೇಶ ಗಾಳಿಗೆ ತೂರಿ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸಾಂಕೇತಿಕ ಖಂಡನಾ ಹೋರಾಟವಾಗಿತ್ತು, ಬೆಂಗಳೂರಿನ ಹಸಿರು ಪ್ರತಿಷ್ಠಾನದವರು ಹೀಗೆ, ಮಂಡು ವಾದ ಮುಂದುವರಿದರೆ ಬೆಂಗಳೂರಿನ ವಿಧಾನ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಮತ್ತು ಸಪ್ತ ಜಿಲ್ಲೆಯೊಳಗೊಂಡ ಪ್ರದೇಶಕ್ಕೆ, ಪ್ರತ್ಯೇಕ ರಾಜ್ಯ ಪ್ರಸ್ತಾವನೆ ಮಂಡಿಸಿ, ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.