ಕುಸ್ತಿ ಕ್ರೀಡಾಪಟುಗಳ ಸಾಧನೆ
ಗದಗ,ಜೂ5: ದಿ:22-06-2024 ರಿಂದ 30-06-2024 ರವರೆಗೆ ಐ.ಜಿ. ಸ್ಟೇಡಿಯಂ, ನವದೆಹಲಿಯಲ್ಲಿ ನಡೆಯಲಿರುವ ಏಷಿಯನ್ ಕುಸ್ತಿ ಚಾಂಪಿಯನ್ ಶಿಪ್‍ಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಗದಗ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದ ಕುಸ್ತಿ ಕ್ರೀಡಾಪಟುಗಳಾದ ಕು. ವೈಷ್ಣವಿ ಇಮ್ಮಡಿಯವರ 46 ಕೆಜಿ ವಿಭಾಗದಲ್ಲಿ ಮತ್ತು ರಾಧಿಕಾ ತೊಂಡಿಹಾಳ 57 ಕೆಜಿ ವಿಭಾಗದಲ್ಲಿ ಆಯ್ಕೆಯಾಗಿ ಗದಗ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ಸದರಿ ಕುಸ್ತಿ ಕ್ರೀಡಾಪಟುಗಳಿಗೆ ಹಾಗೂ ಕುಸ್ತಿ ತರಬೇತುದಾರರಾದ ವಿನಾಯಕ ಯಂಕಂಚಿ ಇವರಿಗೆ ಜಿಲ್ಲಾಧಿಕಾರಿಗಳಾದ ವೈಶಾಲಿ ಎಂ.ಎಲ್. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶರಣು ಐ. ಗೋಗೇರಿ ಇವರು ಅಭಿನಂದನೆ ಸಲ್ಲಿಸಿರುತ್ತಾರೆ.